ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ನಲ್ಲಿ ಬಜರಂಗದಳ ಆಯೋಜಿಸಿದ್ದ ಜನಜಾಗೃತಿ ಸಭೆಯಲ್ಲಿ ಮಾತನಾಡಿದ್ದ ಚೈತ್ರಾ ಕುಂದಾಪುರ ಉದ್ದೇಶಪೂರ್ವಕವಾಗಿ ಕೋಮು ದ್ವೇಷ ಹರಡಲು ಮುಸ್ಲಿಮರು ಲವ್ ಜಿಹಾದ್ ನಿಲ್ಲಿಸಬೇಕು ಇಲ್ಲವಾದಲ್ಲಿ ಶೇ 70ರಷ್ಟು ಇರುವ ಹಿಂದೂಗಳು, ಮುಸ್ಲಿಂ ಹೆಣ್ಣು ಮಕ್ಕಳನ್ನು ಮತಾಂತರ ಮಾಡೋಕೆ ಎರಡು ದಿನ ಸಾಕು. ಭಜರಂಗದಳದ ಕಾರ್ಯಕರ್ತರು ಮುಸ್ಲಿಂ ಹೆಣ್ಣು ಮಕ್ಕಳನ್ನು ಲವ್ ಮಾಡೋಕೆ ಹೊರಟರೆ, ಮುಸ್ಲಿಮರ ಮನೆಯಲ್ಲಿ ಬುರ್ಖಾ ಕಾಣೋದಿಲ್ಲ. ಪ್ರತೀ ಮನೆಯ ಮುಸ್ಲಿಂ ಹೆಣ್ಣುಮಕ್ಕಳ ಹಣೆಗೆ ಕುಂಕುಮ ಇಟ್ಟು ಕರೆದುಕೊಂಡು ಬರುತ್ತೇವೆ ಎಂದು ಪ್ರಚೋದಾನಾಕಾರಿ ಮತ್ತು ವಿವಾದಾತ್ಮಕ ದ್ವೇಷ ಭಾಷಣ ಮಾಡಿ ಮುಸ್ಲಿಂ ಮಹಿಳೆಯರ ಸಾಮೂಹಿಕವಾಗಿ ಮಾನಹರಣ,ಬಲಾತ್ಕಾರ ವಾಗಿ ಮತಾಂತರ ಮಾಡಲು ಪ್ರೇರಣೆ ನೀಡಿ ಮತ್ತು ಹಿಂದೂ ಮುಸ್ಲಿಮರ ನಡುವೆ ದ್ವೇಷ ಬಿತ್ತುವಂತಹ ಹೇಳಿಕೆಗಳನ್ನು ನೀಡಿ ಕಾನೂನಿಗೆ ಗೌರವ ನೀಡದೆ ಬಹಿರಂಗವಾಗಿ ಹೇಳಿಕೆ ನೀಡಿದ ಚೈತ್ರಾ ಕುಂದಾಪುರಳ ವಿರುದ್ಧ ಹಾಗೂ ಈ ಸಭೆಯ ಆಯೋಜಕರ ವಿರುದ್ಧ ಪೋಲಿಸ್ ಇಲಾಖೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ಬಂಧಿಸ ಬಹುದಿತ್ತು ಶಾಂತಿಯನ್ನು ಕದಡುತ್ತಾ ಅಶಾಂತಿಯ ವಾತಾವರಣ ನಿರ್ಮಾಣ ಮಾಡುತ್ತಿರುವ.
ಪ್ರಚೋದನಕಾರಿ ಮಾತುಗಳಿಂದ ಉದ್ರಿಕ್ತ ವಾತಾವರಣ ನಿರ್ಮಾಣ ಮಾಡುತ್ತಿರುವ ಇವರುಗಳ ವಿರುದ್ದ ಮೃಧು ಧೋರಣೆ ಏಕೆ? ಭಾರತದಲ್ಲಿ ಕರಾಳ ಕಾನೂನುಗಳ ವಿರುದ್ಧ ನ್ಯಾಯಯುತವಾಗಿ ಧ್ವನಿ ಎತ್ತಿದ ಮಹಿಳೆಯರ ಮೇಲೆ ಯುಎಪಿಎ ಯಂತಹ ಕರಾಳ ಕಾನೂನು ಗಳನ್ನು ಬಳಸಿಕೊಂಡು ಬಂಧಿಸುವ ಪೋಲಿಸ್ ಮತ್ತು ಸರ್ಕಾರ ಇಂತಹ ಕ್ರಿಮಿಗಳ ಮೇಲೆ ಮೃದು ಧೋರಣೆ ತೋರುತ್ತಿರುವುದು ವಿಪರ್ಯಾಸ
ಮುಸ್ಲಿಂ ಸಮುದಾಯವನ್ನು ಮತ್ತು ಮುಸ್ಲಿಂ ಮಹಿಳೆಯರನ್ನು ಅತ್ಯಂತ ಕೀಳುಮಟ್ಟದಲ್ಲಿ ನಿಂದಿಸಿ ಕೋಮು ಪ್ರಚೋದನಕಾರಿಯಾಗಿ ಭಾಷಣ ಮಾಡಿ ಸಮಾಜದ ಶಾಂತಿ ಸುವ್ಯವಸ್ಥೆಯನ್ನು ಕದಡಲು ಯತ್ನಿಸಿದ ಚೈತ್ರ ಕುಂದಾಪುರ ಇವಳನ್ನ ಕೂಡಲೆ ಬಂಧಿಸಿ ಇವಳ ಮೇಲೆ ಸುಮೋಟೋ, ಯುಎಪಿಎ, ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿಯಲ್ಲಿ ಪೊಲೀಸ್ ಇಲಾಖೆ ಪ್ರಕರಣ ದಾಖಲಿಸಿ ನಗರ ಜಿಲ್ಲೆ ರಾಜ್ಯದ ಶಾಂತಿ-ಸುವ್ಯವಸ್ಥೆ ಕಾಪಾಡಬೇಕೆಂದು ಆಗ್ರಹಿಸುತ್ತಿದ್ದೇವೆ. ಈ ಸಂದರ್ಭದಲ್ಲಿ
ಎಹಸಸ್ ಎ ನಯಬ್ ಆಯುಷ ಏಜಾಜ್ ವಾಹಿದ ಬೇಗಂ ಮುಮ್ತಾಜ್ ಖಾನಂ ಸಾಧಿಕಾ ಬಾನು ಸೈಯದ ಶಬಾನಾ ಮುಂತಾದವರು ಉಪಸ್ಥಿತರಿದ್ದರು.
ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ