ಶಿವಮೊಗ್ಗ ನ್ಯೂಸ್…
ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ಕಾನೂನು ರೂಪಿಸಲು ಆಗ್ರಹಿಸಿ ಮೂರುವರೆ ಸಾವಿರ ಕಿಲೋಮೀಟರ್ ಸೈಕಲ್ ಜಾಥ -ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಹೋರಾಟಕ್ಕೆ ಸಂಪೂರ್ಣ ಬೆಂಬಲ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.
*ದೇಶದಲ್ಲಿ ಆಗುತ್ತಿರುವ ಅತ್ಯಾಚಾರಗಳನ್ನು ಖಂಡಿಸಿ ಹಾಗೂ ಅತ್ಯಾಚಾರಿಗಳಿಗೆ ಕಠಿಣ ಕಾನೂನು ರೂಪಿಸಲು ಆಗ್ರಹಿಸಿ 3500 ಕಿ.ಮಿಟರ್ ಸೈಕಲ್ ಮುಖಾಂತರ ಸಂಚರಿಸಿ ರಾಜ್ಯದ ಎಲ್ಲಾ 31 ಜಿಲ್ಲೆಯ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡುತ್ತಿರುವ *ಬೆಂಗಳೂರಿನ ಕಿರಣ್ ಎಂಬ ಯುವಕ* *ಈಗಾಗಲೇ 19 ಜಿಲ್ಲೆಗಳಿಗೆ ಸರಿ ಸುಮಾರು ಎರಡೂವರೆ ಸಾವಿರ ಕಿಲೋಮೀಟರ್ ಏಕಾಂಗಿ ಸೈಕಲ್ ಜಾಥ ಮೂಲಕ ಹೋಗಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದು ಇಂದು ಬೆಳಗ್ಗೆ ಹೋರಾಟದ 20 ಜಿಲ್ಲೆ *ಶಿವಮೊಗ್ಗ ನಗರಕ್ಕೆ ಆಗಮಿಸಿದ್ದು ಹೋರಾಟಗಾರ ಯುವಕನನ್ನು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನ ಎಲ್ಲಾ ಪದಾಧಿಕಾರಿಗಳು ಶಿವಮೊಗ್ಗ ಜಿಲ್ಲೆಗೆ ಆತ್ಮೀಯವಾಗಿ ಬರಮಾಡಿಕೊಂಡು ಹೋರಾಟಕ್ಕೆ ಯುವ ಕಾಂಗ್ರೆಸ್ ನಿಂದ ಸಂಪೂರ್ಣವಾಗಿ ಬೆಂಬಲಿಸಿ ಮಹಾವೀರ ವೃತ್ತದಲ್ಲಿ ಪ್ರತಿಭಟಿಸಿ ನಂತರ ಸಾಂಕೇತಿಕ ವಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಪ್ರತಿಭಟನಾ ನಡಿಗೆ ಹೊರಟು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು*
ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಕೆ ರಂಗನಾಥ್ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್ ಕುಮಾರ್ , ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್ , ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ಲೋಕೇಶ್ , ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಎಸ್ .ಕುಮರೇಶ್ , ಜಿಲ್ಲಾ ಕಾಂಗ್ರೆಸ್ ನ ಪದಾಧಿಕಾರಿಗಳಾದ ಪುಷ್ಪಕ್ ಕುಮಾರ್ ,INTCU ಜಿಲ್ಲಾಧ್ಯಕ್ಷ ಬಿ ಅರ್ಜುನ್ ,INTCU ವಿದ್ಯಾರ್ಥಿ ಘಟಕದ ಅಧ್ಯಕ್ಷ ನಿಹಾಲ್ ಸಿಂಗ್, ಯುವ ಕಾಂಗ್ರೆಸ್ನ ಅರುಣ್ ನವುಲೆ ವೆಂಕಟೇಶ್ ಕಲ್ಲೂರು ,, ಪವನ್, ರಾಹುಲ್ ಸೀಗೆಹಟ್ಟಿ , ಮಧು, ದರ್ಶನ್ ರಾಹುಲ್ ಮಹಿಳಾ ಕಾಂಗ್ರೆಸ್ ನ ಗೀತಾ ಹಾಗೂ ವಿದ್ಯಾರ್ಥಿಮಿತ್ರರು ಯುವ ಕಾಂಗ್ರೆಸ್ನ ಕಾರ್ಯಕರ್ತರು ಇತರರು ಇದ್ದರು.