ಶಿವಮೊಗ್ಗ ನ್ಯೂಸ್…

ದೇಶದಲ್ಲಿ 100 ಕೋಟಿ ಕೊರೋನಾ ಲಸಿಕೆ ಪೂರ್ಣಗೊಳಿಸಿ ವಿಶ್ವದಾಖಲೆ ಸಾಧನೆ ಮಾಡಿದ ಪ್ರಧಾನ ಮಂತ್ರಿ ನೇತೃತ್ವದ ಸರ್ಕಾರವನ್ನು ಅಭಿನಂದಿಸಿ ಸಾಂಕೇತಿಕವಾಗಿ ಇಂದು ಬಿಜೆಪಿ ಜಿಲ್ಲಾ ಕಾರ್ಯಾಲಯ ಮುಂಭಾಗ ನಗರ ಬಿಜೆಪಿ ವತಿಯಿಂದ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಲಾಯಿತು.

ಈ ಸಂದರ್ಭದಲ್ಲಿ ವಿಭಾಗ ಪ್ರಭಾರಿ ಗಿರೀಶ್ ಪಟೇಲ್, ಬಿಜೆಪಿ ನಗರಾಧ್ಯಕ್ಷ ಜಗದೀಶ್, ಪ್ರಮುಖರಾದ ಕೆ.ವಿ. ಅಣ್ಣಪ್ಪ, ಬಾಲು, ಕುಮಾರಸ್ವಾಮಿ, ಈಶ್ವರ್ ಸೇರಿದಂತೆ ನಗರ ಬಿಜೆಪಿ ಕಾರ್ಯಕರ್ತರು ಇದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…