ಶಿವಮೊಗ್ಗ ನ್ಯೂಸ್…
ಮಕ್ಕಳ ಸಹಾಯವಾಣಿ 1098 ಶಿವಮೊಗ್ಗ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇದರ ಪ್ರಾಯೋಜಕತ್ವದಲ್ಲಿ ಇಂದು ಸೆಂಟ್ ಜೋಸೆಫ್ ಚರ್ಚ್ ನಲ್ಲಿ ಕಾನೂನು ಸೇವಾ ಪ್ರಾಧಿಕಾರದ ಸಹಯೋಗದೊಂದಿಗೆ ಬಾಲ್ಯ ವಿವಾಹ ಮತ್ತು ಲೈಂಗಿಕ ದೌರ್ಜನ್ಯ ಕಾಯ್ದೆಗಳ ಕುರಿತಂತೆ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಿರಿಯ ಸಿವಿಲ್ ನ್ಯಾಯಾಧೀಶರಾದ ಕೆ.ಎನ್. ಸರಸ್ವತಿ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ರೇಖಾ ಜಿ.ಎಂ., ಚಂದ್ರಶೇಖರ್, ಮಕ್ಕಳ ಸಹಾಯವಾಣಿಯ ಅಧಿಕಾರಿಗಳು ಉಪಸ್ಥಿತರಿದ್ದರು