ಶಿವಮೊಗ್ ನ್ಯೂಸ್…
ಕೋವಿಡ್ 19 ಉಚಿತ ಲಸಿಕೆ ಕೇಂದ್ರದ ಮಾಹಿತಿ ಒಳಗೊಂಡ ಬ್ಯಾನರ್‌ಗಳನ್ನು ಜಿಲ್ಲಾದ್ಯಂತ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಉಪಯೋಗಿಸಲು ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯಿAದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಜೇಶ್ ಸುರಗಿಹಳ್ಳಿ ಅವರಿಗೆ ಹಸ್ತಾಂತರಿಸಲಾಯಿತು.
ಡಾ. ರಾಜೇಶ್ ಸುರಗಿಹಳ್ಳಿ ಮಾತನಾಡಿ, ಜಿಲ್ಲಾದ್ಯಂತ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಹಾಗೂ ನಗರಸಭೆ ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉಚಿತ ಕೋವಿಡ್ ಲಸಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯಿAದ ಕೋವಿಡ್ ಉಚಿತ ಲಸಿಕಾ ಕೇಂದ್ರಗಳಿಗೆ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬ್ಯಾನರ್ ಮಾಡಿಸಿಕೊಟ್ಟಿರುವುದು ಹಾಗೂ ಕೋವಿಡ್ ಉಚಿತ ಲಸಿಕೆ ನೀಡುವ ಶಿಬಿರಗಳನ್ನು ಮಾಡಿ ಸಾರ್ವಜನಿಕರಿಗೆ ಅನುಕೂಲ ನೀಡುತ್ತಿರುವುದು ಶ್ಲಾಘನೀಯವಾಗಿದೆ ಎಂದು ತಿಳಿಸಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವತಿಯಿಂದ ದೇಶಾದ್ಯಂತ ಉಚಿತವಾಗಿ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ 13,28,000 ಮೊದಲ ಡೋಸ್ ಲಸಿಕೆ ನೀಡಲಾಗಿದೆ. ಈವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಐದು ಲಕ್ಷ ಜನರಿಗೆ 2ನೇ ಹಂತದ ಲಸಿಕೆ ನೀಡಲಾಗಿದೆ. ಶೇ. 35-40 ಎರಡನೇ ಹಂತದ ಲಸಿಕೆ ನೀಡಲಾಗಿದೆ ಎಂದರು.
ಲಸಿಕೆ ಬಂದಮೇಲೆ ಕೋವಿಡ್ ಮತ್ತು ಕೋವಿಡ್ ಇಂದ ಮರಣ ಹೊಂದಿರುವ ಸಂಖ್ಯೆ ತುಂಬಾ ಕಡಿಮೆಯಾಗಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣದಲ್ಲಿದೆ. ಅಂಕಿ ಅಂಶವನ್ನು ಗಮನಿಸಿದರೆ ಲಸಿಕೆ ತೆಗೆದುಕೊಂಡಿರುವುದರಿAದ ಕೋವಿಡ್ ಪ್ರಕರಣ ರೋಗಿಗಳು ಬಹಳಷ್ಟು ಕಡಿಮೆಯಾಗಿದೆ.
ಪರಿಣಾಮಕಾರಿಯಾದ ಲಸಿಕೆ ಆದ್ದರಿಂದ ಯಾರು ಲಸಿಕೆ ತೆಗೆದುಕೊಂಡಿಲ್ಲ ಅವರು ಲಸಿಕೆಯನ್ನು ಕಡ್ಡಾಯವಾಗಿ ತೆಗೆದುಕೊಳ್ಳಲೇಬೇಕು ಎಂದು ಹೇಳಿದರು.
ಜಿಲ್ಲಾದ್ಯಂತ ಅನೇಕ ಸಂಘ ಸಂಸ್ಥೆಗಳು ಸ್ವಯಂ ಪ್ರೇರಿತವಾಗಿ ಲಸಿಕೆ ನೀಡುವಲ್ಲಿ ಸಹಕರಿಸುತ್ತಿದ್ದು, ಪ್ರಮುಖವಾದ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯು ಆರೋಗ್ಯ ಶಿಬಿರಗಳು ಮತ್ತು ಲಸಿಕಾ ಕೇಂದ್ರಗಳಿಗೆ ತುಂಬಾ ಸಹಕಾರಿ ನೀಡುತ್ತಿದೆ ಎಂದರು.
ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಮಂಜುನಾಥ್ ಕದಂ ಮಾತನಾಡಿ, ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯು ಸಮಾಜದಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತಹ ಎಲ್ಲ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸುತ್ತದೆ. ಕೋವಿಡ್ ಮಹಾಮಾರಿಯನ್ನು ಓಡಿಸುವಲ್ಲಿ ಸಾರ್ವಜನಿಕರಿಗೆ ಕೋವಿಡ್ ಲಸಿಕೆ ಬಗ್ಗೆ ಜಾಗೃತಿ ನೀಡಿ ಲಸಿಕೆ ನೀಡಿಸುವಲ್ಲಿ ಶ್ರಮಿಸುತ್ತಿದ್ದೇವೆ ಎಂದು ತಿಳಿಸಿದರು.
ಜಿಲ್ಲಾ ಕೋವಿಡ್ ಲಸಿಕೆ ಅಧಿಕಾರಿ ಡಾ. ನಾಗರಾಜ್ ನಾಯಕ್, ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯ ಕಮ್ಯುನಿಟಿ ಸರ್ವಿಸ್ ಡೈರೆಕ್ಟರ್ ಜಿ.ವಿಜಯ್‌ಕುಮಾರ್, ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಸತೀಶ್ ಚಂದ್ರ, ತಾಲೂಕು ಕೋವಿಡ್ ಲಸಿಕೆ ಅಧಿಕಾರಿ ಡಾ. ಸತೀಶ್, ರುದ್ರೇಶ್ ಉಪಸ್ಥಿತರಿದ್ದರು.