ಶಿವಮೊಗ್ಗ ನ್ಯೂಸ್…
ಈ ಕುಡಿಯುವ ನೀರಿನ ಘಟಕ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿಯ ಎದುರಿನಲ್ಲೇ ಇದೆ. ಜಿಲ್ಲಾಧಿಕಾರಿಗಳು ಮತ್ತು ತಹಸಿಲ್ದಾರ್ ಇವರುಗಳ ಕಚೇರಿಗಳಿಗೆ ಪ್ರತಿನಿತ್ಯ ಬರುವ ಸಾವಿರಾರು ಜನರಿಗೆ ಕುಡಿಯುವ ನೀರಿನ ಅವಶ್ಯಕತೆ ಪೂರೈಸಲು ಈ ಘಟಕವನ್ನು ಸ್ಥಾಪಿಸಲಾಗಿತ್ತು.
ಆದರೆ ಕಳೆದ ಕೆಲವು ದಿನಗಳಿಂದ ಈ ಘಟಕದ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿರುವುದರಿಂದ ಸಾರ್ವಜನಿಕರಿಗೆ ಕುಡಿಯುವ ನೀರು ಸಿಗದೆ ಸಾಕಷ್ಟು ತೊಂದರೆಯಾಗಿದೆ. ದಯಮಾಡಿ ಸಂಬಂಧಪಟ್ಟ ಅಧಿಕಾರಿಗಳು ಈ ಕೂಡಲೇ ಕುಡಿಯುವ ನೀರಿನ ಘಟಕದ ಸಮಸ್ಯೆಯನ್ನು ಬಗೆಹರಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಆಗ್ರಹಿಸುತ್ತೇನೆ.
ಡಾ.ಎ. ಸತೀಶ್ ಕುಮಾರ್ ಶೆಟ್ಟಿ
ಸಂಘಟನಾ ಕಾರ್ಯದರ್ಶಿ
ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟ (ನೊಂ).