ಶಿವಮೊಗ್ಗ ನ್ಯೂಸ್…
ಶಿವಮೊಗ್ಗ ನಗರದ ಮೆಗ್ಗಾನ್ ಆಸ್ಪತ್ರೆಯ ಮಕ್ಕಳ ವಾರ್ಡ್ನಕಲ್ಲಿ ಭಾನುವಾರ ರಾತ್ರಿ ಬೆಂಕಿ ಮತ್ತು ದಟ್ಟವಾದ ಹೊಗೆ ಕಾಣಿಸಿಕೊಂಡು ತೀವ್ರ ಆತಂಕಕ್ಕೆ ಕಾರಣವಾಗಿತ್ತು.
ಆಸ್ಪತ್ರೆಯ ಮಕ್ಕಳ ಒಬಿಜಿ ಐಸಿಯು ವಾರ್ಡ್ನ್ಲ್ಲಿ ಈ ಘಟನೆ ನಡೆದಿದ್ದು, ಎಸಿ ಒಂದರಲ್ಲಿ ವಿದ್ಯುತ್ ಶಾರ್ಟ್ ಸಕ್ರ್ಯೂಟ್ ಆಗಿದ್ದ ಎಸಿ ಸ್ಪೋಟಿಸಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ತಕ್ಷಣ ಅಲ್ಲಿದ್ದ ಸಿಬ್ಬಂದಿ ರೋಗಿಗಳನ್ನು ಬೇರೆ ಕಡೆಗೆ ಸ್ಥಳಾಂತರಿಸುವಲ್ಲಿ ಯಶಸ್ವಿಯಾಗಿದ್ದಾರೆ.ಘಟನೆ ಸಂಭವಿಸಿದಾಗ ಕೇವಲ ಇಬ್ಬರು ಮಹಿಳೆಯರು ಮಾತ್ರ ವಾರ್ಡ್ನುಲ್ಲಿದ್ದರು ಎಂದು ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದಾರೆ. ಅಲ್ಲೇ ಇದ್ದ ಸಿಬ್ಬಂದಿ ಅವರುಗಳನ್ನು ಬೇರೆ ವಾರ್ಡ್ಗೆಕ ಸ್ಥಳಾಂತರಿಸಿದ್ದಾರೆ.
ಈ ವಾರ್ಡ್ನುಲ್ಲಿ ಕಡಿಮೆ ರೋಗಿಗಳನ್ನು ದಾಖಲು ಮಾಡಿಕೊಳ್ಳುವುದರಿಂದ ಹೆಚ್ಚಿನ ಅನಾಹುತವಾಗಿಲ್ಲ. ಬೆಂಕಿ ಕಾಣಿಸಿಕೊಂಡ ವಾರ್ಡ್ನ ಬೆಡ್, ಕಾರ್ಟನ್ ಸೇರಿದಂತೆ ಇತರೆ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಸುದ್ದಿ ತಿಳಿದ ಅಗ್ನಿ ಶಾಮಕ ದಳದ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಧಾವಿಸಿ ಬೆಂಕಿ ಆರಿಸುವಲ್ಲಿ ಯಶಸ್ವಿಯಾಗಿದ್ದಾರೆ.2019 ರಲ್ಲಿ ಇದೇ ಆಸ್ಪತ್ರೆಯ ಮಕ್ಕಳ ವಾರ್ಡ್ನ್ಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಐಸಿಯುನಲ್ಲಿದ್ದ ಮಕ್ಕಳನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು. ಆ ಘಟನೆ ಹಸಿಯಾಗಿರುವಾಗಲೇ ಮತ್ತೊಂದು ಅವಘಡ ಸಂಭವಿಸಿದ್ದು, ಸಿಬ್ಬಂದಿಗಳ ಆತಂಕಕ್ಕೆ ಕಾರಣವಾಗಿತ್ತು.
ಘಟನೆ ನಡೆದ ಸುದ್ದಿ ತಿಳಿಯುತ್ತಲೇ ಆಸ್ಪತ್ರೆ ಅಧೀಕ್ಷಕ ಡಾ.ಎಸ್. ಶ್ರೀಧರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾಹಿತಿ ನೀಡಿದ ಅವರು, ಹವಾನಿಯಂತ್ರಿತ ಉಪಕರಣದಲ್ಲಿನ ಆಗಿರುವ ತಾಂತ್ರಿಕ ದೋಷದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಯಾವುದೇ ಅಪಾಯವಾಗಿಲ್ಲ. ಎಲ್ಲಾ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.