ಧರ್ಮಸ್ಥಳ ನ್ಯೂಸ್…
ಕರ್ನಾಟಕ ಸರ್ಕಾರದ ಗೃಹ ಸಚಿವರಾದ ಶ್ರೀ ಆರಗ ಜ್ಞಾನೇಂದ್ರ ರವರು ಇಂದು ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಮಾಡಿ ನಂತರ ಧರ್ಮಾಧಿಕಾರಿ ಡಾ: ಶ್ರೀ ವೀರೇಂದ್ರ ಹೆಗ್ಗಡೆ ರವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಡಾ: ವೀರೇಂದ್ರ ಹೆಗ್ಗಡೆಯವರು, ಗೃಹ ಸಚಿವ ಆರಗ ಜ್ಞಾನೇಂದ್ರ ರವರ ಕಾರ್ಯಕ್ಷಮತೆ ಬಗ್ಗೆ ಮೆಚ್ಚುಗೆಯ ನುಡಿಗಳನ್ನಾಡಿದರು. ನಂತರ ಸಚಿವರು ಧರ್ಮಸ್ಥಳದಲ್ಲಿ ನೂತನ ಪೊಲೀಸ್ ಠಾಣೆ ಕಟ್ಟಡ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿದರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರು ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.