ಶಿವಮೊಗ್ಗ ನ್ಯೂಸ್…

ಪ್ರಸ್ತುತ ದಿನಗಳಲ್ಲಿ ಆರೋಗ್ಯ ಕಾಪಾಡಿಕೊಳ್ಳುವ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಬೇಕು ಎಂದು ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಮಂಜುನಾಥ್ ಕದಂ ಹೇಳಿದರು.

ರಾಜೇಂದ್ರ ನಗರದ ರೋಟರಿ ಶಾಲೆ ಆವರಣದಲ್ಲಿ ರೋಟರಿ ಶಿವಮೊಗ್ಗ ಪೂರ್ವ, ಕಂಪಾನಿಯೋ ಸಂಸ್ಥೆಯೊAದಿಗೆ ಆಯೋಜಿಸಿದ್ದ ಸಾರ್ವಜನಿಕರಿಗೆ ಉಚಿತ ಆರೋಗ್ಯ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಆರೋಗ್ಯ ಸಂಪತ್ತಿನ ಮುಂದೆ ಯಾವುದೇ ಸಂಪತ್ತು ಮುಖ್ಯವಲ್ಲ ಎನ್ನುವ ಸ್ಥಿತಿ ನೋಡುತ್ತಿದ್ದೇವೆ. ಆರೋಗ್ಯ ಉತ್ತಮವಾಗಿದ್ದರೆ ಏನನ್ನು ಬೇಕಾದರೂ ಸಾಧಿಸಬಹುದಾಗಿದೆ. ಆರೋಗ್ಯವೇ ಮುಖ್ಯ ಎಂದು ಅಭಿಪ್ರಾಯಪಟ್ಟರು.

ಇಂದಿನ ದಿನಗಳಲ್ಲಿ ಎಲ್ಲ ವಯೋಮಾನದವರಿಗೂ ಕಾಯಿಲೆಗಳು ಬರುತ್ತಿದ್ದು, ಆರೋಗ್ಯದ ಬಗ್ಗೆ ಜಾಗೃತಿ ವಹಿಸಬೇಕು. ಉತ್ತಮ ಜೀವನ ಶೈಲಿ, ಆಹಾರ ಪದ್ಧತಿ ರೂಢಿಸಿಕೊಳ್ಳಬೇಕು. ಬದಲಾದ ವ್ಯವಸ್ಥೆಗಳ ಬಗ್ಗೆ ತಿಳವಳಿಕೆ ಮೂಡಿಸಿಕೊಳ್ಳಬೇಕು. ಆಗಾಗ್ಗೆ ಆಧುನಿಕ ತಂತ್ರಜ್ಞಾನದ ನೆರವಿನಿಂದ ಆರೋಗ್ಯ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಮೇಕ್ ಇನ್ ಇಂಡಿಯಾ ಅಡಿಯಲ್ಲಿ ಕಂಪಾನಿಯೋ ಸಂಸ್ಥೆಯಿAದ ಬಾಡಿ ಪಲ್ಸ್ ಥೆರಪಿ ಉಪಕರಣ ಸಿದ್ಧವಾಗಿದೆ. ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದರು.
ಸಮುದಾಯ ಸೇವೆಗಳ ನಿರ್ದೇಶಕ ಜಿ.ವಿಜಯ್‌ಕುಮಾರ್ ಮಾತನಾಡಿ, ಪಲ್ಸ್ ಥೆರಪಿಯು ದೇಹದ ಸ್ನಾಯು ಸೆಳೆತ, ನಿದ್ರಾಹೀನತೆ ಮತ್ತು ರಕ್ತ ಸಂಚಾರಕ್ಕೆ ಸಂಬAಧಿಸಿದ ಆರೋಗ್ಯ ಸಮಸ್ಯೆಗಳನ್ನು ಔಷಧಿ ಮಾತ್ರೆಗಳಿಲ್ಲದೇ ಗುಣಪಡಿಸುವ ಚಿಕಿತ್ಸೆಯಾಗಿದೆ. 20 ದಿನಗಳ ಕಾಲ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಶಿಬಿರ ನಡೆಯಲಿದೆ ಎಂದು ಹೇಳಿದರು.

ಕಂಪಾನಿಯೋ ಸಂಸ್ಥೆ ಮುಖ್ಯಸ್ಥ ನೂತನ್ ಮಾತನಾಡಿ, ಅಧಿಕ ರಕ್ತದೊತ್ತಡ, ಸಕ್ಕರೆ ಕಾಯಿಲೆ, ಬೆನ್ನು ನೋವು,ಮಂಡಿ ನೋವು ಹಾಗೂ ವಿವಿಧ ನರಗಳ ಸಮಸ್ಯೆಗೆ ರಕ್ತ ಸಂಚಾರವನ್ನು ಪರಿಣಾಮಕಾರಿಯಾಗಿ ಮಾಡುವುದರ ಜತೆಗೆ ಕಾಯಿಲೆ ಗುಣಪಡಿಸಬಹುದಾಗಿದೆ ಎಂದು ತಿಳಿಸಿದರು.
ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಸತೀಶ್‌ಚಂದ್ರ, ವಸಂತ್ ಹೋಬಳಿದಾರ್, ಚಂದ್ರಶೇಖರ್, ಇನ್ನರ್‌ವ್ಹೀಲ್ ಅಧ್ಯಕ್ಷೆ ಜಯಂತಿ ವಾಲಿ, ಕಾರ್ಯದರ್ಶಿ ಬಿಂದು ವಿಜಯ್‌ಕುಮಾರ್, ಸೂರ್ಯನಾರಾಯಣ್ ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…