ಶಿವಮೊಗ್ಗ ನ್ಯೂಸ್…
ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ವಿದ್ಯಾರ್ಥಿ ವೇತನವನ್ನು ತಕ್ಷಣವೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಶಿವಮೊಗ್ಗದ ವತಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
2020-2021 ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗಳ ಪದವಿಪೂರ್ವ ಮತ್ತು ಅದರ ಮೇಲ್ಪಟ್ಟು ಎಲ್ಲಾ ಕಾಲೇಜು ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನವನ್ನು ಒಂದೇ ಪೊರ್ಟಲ್ ನಲ್ಲಿ ನೀಡಲಾಗಿತ್ತು ಆದರೆ ಈ ಸಾಲಿನಲ್ಲಿ ಖಾಸಗಿ ಕೋಟಾದ ಅಡಿ ವಿವಿಧ ಕೋರ್ಸಗಳಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ್ದರು. ಸರ್ಕಾರ ಆರ್ಥಿಕ ಮುಗಟ್ಟಿನ ಕಾರಣ ನೀಡಿ ಖಾಸಗಿ ಕೋಟಾದಡಿ ಪ್ರವೇಶ ಪಡೆದವರಿಗೆ ವಿದ್ಯಾರ್ಥಿ ವೇತನ ನೀಡುವುದಿಲ್ಲ ಎಂದು ತಿಳಿಸಿತ್ತು.
ಬಳಿಕ ವಿದ್ಯಾರ್ಥಿಗಳ ಒತ್ತಾಯದ ಮೇರೆಗೆ ಸಚಿವ ಶ್ರೀನಿವಾಸ್ ಪೂಜಾರಿಯವರು ಅವರಿಗೂ ವಿದ್ಯಾರ್ಥಿ ವೇತನ ನೀಡುವುದಾಗಿ ತಿಳಿಸಿದ್ದರು. ಆದರೆ, ಇನ್ನೂ ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ವಿದ್ಯಾರ್ಥಿ ವೇತನ ದೊರಕಿಲ್ಲ. ಇದರಿಂದ ವಿದ್ಯಾರ್ಥಿಗಳು ಸಂಕಷ್ಟಕ್ಕಿಡಾಗಿದ್ದಾರೆ ಎಂದು ದೂರಿದರು. ಹಲವಾರು ವಿವಿಗಳು ಸಂಬಂಧಪಟ್ಟ ಇಲಾಖೆಗಳಿಗೆ ವಿದ್ಯಾರ್ಥಿಗಳ ಮಾಹಿತಿ ಒದಗಿಸದಿರುವುದು ಕೂಡ ವಿಳಂಬಕ್ಕೆ ಕಾಣವಾಗಿದೆ. ಆದ್ದರಿಂದ ಸರ್ಕಾರ ಕೂಡಲೆ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿ ಎಲ್ಲಾ ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ವಿದ್ಯಾರ್ಥಿ ವೇತನ ನೀಡಬೇಕೆಂದು ಎಬಿವಿಪಿ ಆಗ್ರಹಿಸಿದೆ. ಇಲ್ಲದಿದ್ದಲ್ಲಿ ಉಗ್ರ ಪ್ರತಿಭಟನೆ ಹಮ್ಮಿ ಕೊಳ್ಳುವ ಎಚ್ಚರಿಕೆಯನ್ನು ನೀಡಿದೆ.
ಈ ಸಂದರ್ಭದಲ್ಲಿ ಎಬಿವಿಪಿ ಜಿಲ್ಲಾ ಸಂಚಾಲಕ ಧನುಷ್, ದರ್ಶನ್, ಅಭಿಷೇಕ್, ಪ್ರವೀಣ್, ಸಂಧ್ಯಾ ಮೊದಲಾದವರು ಇದ್ದರು.