ಶಿವಮೊಗ್ಗ ನ್ಯೂಸ್…

ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನುರಂಜನ್ ರವಿಚಂದ್ರನ್ ಅಭಿನಯದ ಬಹುನಿರೀಕ್ಷಿತ “ಮುಗಿಲ್ ಪೇಟೆ” ಚಿತ್ರ ನವೆಂಬರ್ 19 ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

ಈ ಕುರಿತು ಇಂದು ಪತ್ರಿಕಾಗೊಷ್ಠಿಯಲ್ಲಿ ಚಿತ್ರದ ಬಗ್ಗೆ ಸಂಕ್ಷಿಪ್ತ ವಿವಿರಣೆ ನೀಡಿದ ನಟ ಮನುರಂಜನ್, ಈ ಚಿತ್ರವು ನನ್ನ ಪಾಲಿಗೆ ನಿರೀಕ್ಷೆಯ ಚಿತ್ರವಾಗಿದೆ. ಈಗಾಗಲೆ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳಿಗೆ ಅಪಾರ ಮೆಚ್ಚುಗೆ ಸಿಕ್ಕಿದೆ. ಇದೊಂದು ಇಡೀ ಕುಟುಂಬ ಕುಳಿತು ನೊಡಬಹುದಾದ ಚಿತ್ರವಾಗಿದೆ. ಇಂಪಾದ ಹಾಡುಗಳು, ಸೊಗಸಾದ ಹೊರಾಂಗಣ ಚಿತ್ರೀಕರಣ, ನವಿರಾದ ಪ್ರೇಮ ಹೀಗೆ ಚಿತ್ರ ಸಾಗುತ್ತದೆ. ಒಟ್ಟಾರೆ, ಇದು ಒಂದು ಉತ್ತಮ ಕೌಟುಂಬಿಕ ಚಿತ್ರವಾಗಿದ್ದು. ಚಿತ್ರ ಯಶಸ್ವಿಯಾಗಲಿದೆ ಎಂಬ ನಂಬಿಕೆ ನನ್ನದು ಎಂದರು. 

ಭರತ್ ಎಸ್. ನಾವುಂದ ಈ ಚಿತ್ರ ನಿರ್ದೇಶಿಸಿದ್ದಾರೆ. “ಮುಗಿಲ್ ಪೇಟೆ” ಇಡೀ ಚಿತ್ರತಂಡದ ಶ್ರಮದ ಫಲವಾಗಿ ಇಂದು ನಮ್ಮ ಚಿತ್ರ ಬಿಡುಗಡೆ ಹಂತಕ್ಕೆ ಬಂದಿದೆ. 90 ದಿನಗಳ ಕಾಲ ಬೆಂಗಳೂರು, ಚಿಕ್ಕಮಗಳೂರು, ಹಾಸನ, ಸಕಲೇಶಪುರ, ಕುಂದಾಪುರ, ತೀರ್ಥಹಳ್ಳಿ ಮುಂತಾದ ಕಡೆ ಚಿತ್ರೀಕರಣ ನಡೆಸಿದ್ದೇವೆ ಎಂದರು.   ಸಂಬಂಧಗಳಿಗೆ ಬೆಲೆ ಕೊಡುವ ಕುಟುಂಬವೊಂದು. ಸಂಬಂಧಗಳನ್ನು ಕಡೆಗಾಣಿಸುವ ಕುಟುಂಬ ಮತ್ತೊಂದು. ಈ ಎರಡು ಕುಟುಂಬದ ಎರಡು ಜೀವಗಳ ನಡುವೆ ಪ್ರೀತಿ ಮಾಡಿದಾಗ ಏನಾಗುತ್ತದೆ ಎಂಬುದೆ “ಮುಗಿಲ್ ಪೇಟೆ”ಯ ಕಥಾವಸ್ತು. ಕೌಟುಂಬಿಕ ಸನ್ನಿವೇಶ, ಪ್ರೀತಿ, ಸಾಹಸ, ಉತ್ತಮ ಹಾಸ್ಯ ಎಲ್ಲವೂ ನಮ್ಮ ಸಿನಿಮಾದಲ್ಲಿದೆ ಎಂದರು.

ಈ ಚಿತ್ರದಲ್ಲಿ ಸಾಧುಕೋಕಿಲ, ರಂಗಾಯಣರಘು, ತಾರಾ, ಅವಿನಾಶ್ ಅವರಂತಹ ಉತ್ತಮ ಕಲಾವಿದರೊಡನೆ ಅಭಿನಯಿಸಿದ್ದ ಅನುಭವ ನಿಜಕ್ಕೂ ಮರೆಯುವ ಹಾಗಿಲ್ಲ. ನಾಯಕಿ ಕಯಾದು ಲೋಹರ್ ಅವರ ಅಭಿನಯ ಸೊಗಸಾಗಿ ಮೂಡಿಬಂದಿದೆ. ಚಿತ್ರದ ತುಣುಕು ಹಾಗೂ ಹಾಡುಗಳನ್ನು ಅಪ್ಪನಿಗೆ ಚಿತ್ರ ತೋರಿಸಿದೆ. ಇಷ್ಟಪಟ್ಟರು ಅವರ ಆಶೀರ್ವಾದ ಸದಾ ಇರುತ್ತದೆ ಎಂದರು.ವಿಶೇಷವಾಗಿ ಮೊದಲ ಬಾರಿಗೆ ನಟ ಸಾಧುಕೋಕಿಲ 17 ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಒಂದು ಚಿತ್ರ ಮಾಡಲು ಇಡೀ ತಂಡದ ಸಹಕಾರ ಅಗತ್ಯ. ಚಿತ್ರರಂಗದಲ್ಲಿ ನಾನು ಮಗು ಇದ್ದ ಹಾಗೆ. ಇದು ನನ್ನ ಮೊದಲ ನಿರ್ಮಾಣದ ಚಿತ್ರ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು. 

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…