ಶಿವಮೊಗ್ಗ ನ್ಯೂಸ್…
ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆರ್. ಪ್ರಸನ್ನಕುಮಾರ್ ಇಂದು ನಾಮಪತ್ರ ಸಲ್ಲಿಸುವ ಮೊದಲು ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್ ಶ್ರೀ ಸರ್ವಸಿದ್ಧಿ ವಿನಾಯಕ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಕಿಮ್ಮನೆ ರತ್ನಾಕರ್, ಪಾಲಿಕೆ ಸದಸ್ಯ ಹೆಚ್.ಸಿ. ಯೋಗೀಶ್, ವಿಜಯಕುಮಾರ್, ಎಸ್.ಪಿ. ದಿನೇಶ್, ದೇವಿಕುಮಾರ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಇದ್ದರು.