ಶಿವಮೊಗ್ಗ ನ್ಯೂಸ್…

ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೆ ತಂದಿರುವುದನ್ನು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಸ್ವಾಗತಿಸಿದೆ.ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಮಾಡಿರುವ ಅಧ್ಯಯನ ಕೇಂದ್ರದ ಕಲ್ಲೂರು ಮೇಘರಾಜ್, ಸರ್ಕಾರ ಒಳ್ಳೆಯ ನಿರ್ಧಾರ ತೆಗೆದುಕೊಂಡಿದೆ.

ಆದರೆ, ಇದನ್ನು ವಿಳಂಬ ಮಾಡದೆ ರಾಜ್ಯ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದು ಶೀಘ್ರವೇ ಅನುಷ್ಟಾನಕ್ಕೆ ತರಬೇಕು. ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಯಶಸ್ವಿ ಯೋಜನೆ ಬಗ್ಗೆ ಹೆಚ್ಚು ಒಲವು ತೋರಿಸಿದ್ದಾರೆ. ರಾಜ್ಯದ ಲಕ್ಷಾಂತರ ರೈತರಿಗೆ ಮತ್ತು ಸಹಕಾರಿಗಳಿಗೆ ನೆರವಾಗುವ ಈ ಯೋಜನೆಗೆ ವರ್ಷಕ್ಕೆ ಸುಮಾರು 400 ಕೋಟಿ ರೂ. ಬೇಕಾಗಬಹುದು. ಚುನಾವಣಾ ನೀತಿ ಸಂಹಿತೆ ಮುಗಿದ ನಂತರ ಸರ್ಕಾರ ಇದಕ್ಕೊಂದು ಸ್ಪಷ್ಟ ರೂಪ ಕೊಡಬೇಕು ಎಂದು ಮನವಿ ಮಾಡಿದ್ದಾರೆ.

ಆಯುಷ್ಮಾನ್ ಯೋಜನೆಯ ಪಲಾನುಭವಿಗಳು ನೇರವಾಗಿ ಖಾಸಗಿ ಆಸ್ಪತ್ರೆಗೆ ಹೊಗುವಂತಿಲ್ಲ. ಸರ್ಕಾರಿ ಆಸ್ಪತ್ರೆಗೆ ಸೇರಿ ನಂತರ ಅಲ್ಲಿಂದ ಖಾಸಗಿ ಆಸ್ಪತ್ರೆಗೆ ಶಿಫಾರಸ್ಸು ಮಾಡಿಕೊಳ್ಳಬೇಕು. ಇದರಿಂದ ರೋಗಿಗಳಿಗೆ ತೊಂದರೆಯಾಗುತ್ತದೆ. ನೇರವಾಗಿ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆ ಪಡೆಯುವಂತೆ ನಿಯಮಗಳನ್ನು ಸಡಿಲಿಸಬೇಕು ಎಂದು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.ಈ ಸಂದರ್ಭದಲ್ಲಿ ಪ್ರಮುಖರಾದ ಹೊಳೆಮಡಿಲು ವೆಂಕಟೇಶ್ ಹೆಚ್.ಎಂ ಸಂಗಯ್ಯ, ಶಂಕ್ರಾನಾಯ್ಕ, ರಾಮಚಂದ್ರ, ಈರಪ್ಪ, ದರ್ಮಪ್ಪ, ಎಸ್.ವಿ.ರಾಜಮ್ಮ, ಗಂಗಾಧರ, ಶ್ರೀಧರ್, ಹೇಮಂತ್, ಆಶಾ, ರೇಖಾನಾಯ್ಕ, ಪಾಂಡುರಂಗ, ನಾಗೇಶ್ ಸೇರಿದಂತೆ ಹಲವರು ಇದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…