ಶಿವಮೊಗ್ಗ ನ್ಯೂಸ್…
ಕೇಂದ್ರ ಸರ್ಕಾರ 3 ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆದ ಹಿನ್ನಲೆಯಲ್ಲಿ ಇಂದು ನಗರದ ಬಸ್ ನಿಲ್ದಾಣದ ಅಶೋಕ ವೃತ್ತದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾದಿಂದ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಲಾಯಿತು.
ಈ ಸಂದರ್ಭದಲ್ಲಿ ರೈತ ನಾಯಕರ ಹೋರಾಟಕ್ಕೆ ಸಿಕ್ಕ ಜಯ ಇದಾಗಿದ್ದು, ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ವಿರುದ್ಧ ಕಳೆದ ಒಂದು ವರ್ಷದಿಂದ ನಡೆಸುತ್ತಿರುವ ರೈತ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಇನ್ನಾದರೂ, ಪ್ರಧಾನಿ ಮೋದಿ ಸರ್ವಾಧಿಕಾರಿ ಧೋರಣೆ ಬಿಟ್ಟು ರೈತರಿಗೆ ಮನ್ನಣೆ ನೀಡಬೇಕು.
ಪ್ರಾಣ ಕಳೆದುಕೊಂಡ ರೈತ ಕುಟುಂಬಗಳಿಗೆ ಕೂಡಲೇ ಪರಿಹಾರ ನೀಡಬೇಕೆಂದು ರೈತರ ಮುಖಂಡರು ಆಗ್ರಹಿಸಿದರು. ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್ ರೈತ ನಾಯಕರಾದ ಹೆಚ್.ಆರ್. ಬಸವರಾಜಪ್ಪ, ಕೆ.ಪಿ. ಶ್ರೀಪಾಲ್, ಎನ್. ರಮೇಶ್, ಕೆ.ಎಲ್. ಅಶೋಕ್, ಡಿಎಸ್ಎಸ್ ಹಾಲೇಶಪ್ಪ, ನಾಗರಾಜ ಕಂಕಾರಿ, ಪಾಲಾಕ್ಷಿ, ವಿಶ್ವನಾಥ್ ಕಾಶಿ, ಕೆ. ರಂಗನಾಥ್ ಮೊದಲಾದವರಿದ್ದರು.