ಶಿವಮೊಗ್ಗ ನ್ಯೂಸ್…

ಶಿವಮೊಗ್ಗ ವಿಧಾನ ಪರಿಷತ್ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಆರ್. ಪ್ರಸನ್ನಕುಮಾರ್ ಇಂದು ಚುನಾವಣಾಧಿಕಾರಿಗೆ ಬಿ ಫಾರಂನೊಂದಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್, ಶಾಸಕ ಬಿ.ಕೆ. ಸಂಗಮೇಶ್ವರ್ ಇದ್ದರು.ಆರ್. ಪ್ರಸನ್ನಕುಮಾರ್ ಅವರು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಪಾದಯಾತ್ರೆ ಮೂಲಕ ಬಂದು ನಾಮಪತ್ರ ಸಲ್ಲಿಸಿದರು. ಪಾದಯಾತ್ರೆಯಲ್ಲಿ ಮಾಜಿ ಶಾಸಕ ಶಾಂತನಗೌಡ, ಶಂಕರಘಟ್ಟ ರಮೇಶ್, ಹೆಚ್.ಸಿ. ಯೋಗೀಶ್, ರಮೇಶ್ ಹೆಗ್ಡೆ, ಕಲಗೋಡು ರತ್ನಾಕರ್ ಇದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…