ಶಿವಮೊಗ್ಗ ನ್ಯೂಸ್…

ಕೋಣಂದೂರಿನಲ್ಲಿ ನಡೆದ ವಲಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯು ಚಾಂಪಿಯನ್ ಆಗಿ ಹೊರಹೊಮ್ಮಿದೆ. ವಿವಿಧ ವಿಭಾಗದ ಕಲಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಲಭಿಸಿದೆ.
ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯು ಏಕವ್ಯಕ್ತಿ ಭಾವಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಏಕವ್ಯಕ್ತಿ ಜಾನಪದ ಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಯುಗಳ ಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಸಮೂಹಗಾನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಸಮೂಹ ಜಾನಪದ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಏಕವ್ಯಕ್ತಿ ನೃತ್ಯ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಹಾಗೂ ಕಿರು ಪ್ರಹಸನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ.

ವಿವಿಧ ವಿಭಾಗದ ಸ್ಪರ್ಧೆಗಳಲ್ಲಿ ಪ್ರಶಸ್ತಿ ಗಳಿಸುವ ಮೂಲಕ ಕೋಣಂದೂರಿನಲ್ಲಿ ನಡೆದ ವಲಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಲಯ 11ರ ಚಾಂಪಿಯನ್ಸ್ ಆಗಿದೆ. ಈ ಸಂದರ್ಭದಲ್ಲಿ ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಮಂಜುನಾಥ್ ಕದಂ ಅವರು ಸ್ಪರ್ಧೆಯನ್ನು ಅತ್ಯಂತ ಯಶಸ್ವಿಯಾಗಿ ನಡೆಸಿಕೊಟ್ಟ ಕೋಣಂದೂರು ಕ್ಲಬ್ ಅಧ್ಯಕ್ಷರು ಹಾಗೂ ಕಾರ್ಯದರ್ಶಿ ಕಾರ್ಯಕಾರಿ ಮಂಡಳಿಯ ಸದಸ್ಯರಿಗೆ ಧನ್ಯವಾದಗಳನ್ನು ತಿಳಿಸಿದರು.
ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯು ಉತ್ತಮ ಪ್ರದರ್ಶನ ನೀಡಿ ಚಾಂಪಿಯನ್ ಆಗಿರುವುದು ಸಂತಸ ತಂದಿದೆ. ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯು ಎಲ್ಲರ ಸಹಕಾರದೊಂದಿಗೆ ಸಮಾಜಮುಖಿಯಾಗಿ ಸೇವಾ ಚಟುವಟಿಕೆಗಳನ್ನು ಯಶಸ್ವಿಯಾಗಿ ನಡೆಸುತ್ತಿದೆ ಎಂದರು.

ರೋಟರಿ ವಲಯ 10ರ ಚಾಂಪಿಯನ್ಸ್ ಆಗಿ ರೋಟರಿ ಕ್ಲಬ್ ಶಿವಮೊಗ್ಗ ಪಡೆದುಕೊಂಡಿದೆ. ಏಕವ್ಯಕ್ತಿ ಭಾವಗೀತೆ ದ್ವಿತೀಯ ಸ್ಥಾನ, ಏಕವ್ಯಕ್ತಿ ಜಾನಪದ ಗೀತೆ ಪ್ರಥಮ ಸ್ಥಾನ, ಯುಗಳಗೀತೆ ಪ್ರಥಮ ಸ್ಥಾನ , ಸಮೂಹ ಗಾಯನ ಪ್ರಥಮ ಸ್ಥಾನ ಪಡೆದಿದೆ. ರೋಟರಿ ಕ್ಲಬ್ ಶಿವಮೊಗ್ಗ ಸಂಸ್ಥೆಯ ಅಧ್ಯಕ್ಷ ಕಿಶೋರ್ ಶಿರನಾಳ ಮತ್ತು ಪದಾಧಿಕಾರಿಗಳು ಹಾಜರಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…