ಶಿವಮೊಗ್ಗ ನ್ಯೂಸ್…

ರಾಜ್ಯದ 25 ಸ್ಥಾನಗಳಿಗೆ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವೈಫಲ್ಯಗಳೇ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಕಾರಣವಾಗಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಿವಮೊಗ್ಗ ಸೇರಿದಂತೆ ರಾಜ್ಯದ ಕಾಂಗ್ರೆಸ್ ಅಭ್ಯರ್ಥಿಗಳು ಹೆಚ್ಚಾಗಿ ಗೆಲ್ಲಲಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಎಂದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಆಡಳಿತ ವೈಫಲ್ಯವೇ ಆಗಿದೆ. ರಾಜ್ಯ ಸರ್ಕಾರದ ಆಡಳಿತ ಯಂತ್ರ ಕುಸಿದುಬಿದ್ದಿದೆ. ಬಡವರು ಕೃಷಿಕರು ನೊಂದು ಹೋಗಿದ್ದಾರೆ. ಕಂಬನಿ ಮಿಡಿಯುತ್ತಿದ್ದಾರೆ. ಇದರ ವಿರುದ್ಧ ಸ್ಥಳೀಯ ಸಂಸ್ಥೆ ಸದಸ್ಯರು ದನಿ ಎತ್ತಲಿದ್ದಾರೆ ಮತ್ತು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲಿದ್ದಾರೆ ಎಂದರು.ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಆರ್.ಪ್ರಸನ್ನಕುಮಾರ್ ಅವರ ಗೆಲುವು ಖಚಿತ.

ಅವರು ಸುಮಾರು 500 ಕ್ಕೂ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಗ್ರಾಮ ಪಂಚಾಯಿತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗಳೇ ಹೆಚ್ಚಾಗಿ ಗೆದ್ದಿರುವುದು ನಮಗೆ ವರದಾನವಾಗಲಿದೆ. ಮತ್ತು ಜೆಡಿಎಸ್ನಿಂವದ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರಿರುವುದು ಕೂಡ ಪ್ರಸನ್ನಕುಮಾರ್ ಗೆಲುವಿಗೆ ಸಹಾಯಕವಾಗಲಿದೆ ಎಂದರು.ಈಗಾಗಲೇ ಪ್ರಚಾರ ಆರಂಭವಾಗಿದ್ದು, ಜಿಲ್ಲೆಯ ಮತ್ತು ದಾವಣಗೆರೆ ಜಿಲ್ಲೆಯ ಹೊನ್ನಾಳಿ, ಚೆನ್ನಗಿರಿ, ಮಾಯಕೊಂಡ ಕ್ಷೇತ್ರಗಳಲ್ಲಿಯೂ ಕೂಡ ಪ್ರಚಾರವನ್ನು ಆರಂಭಿಸಲಾಗುವುದು. ಎಲ್ಲಾ ಕಡೆ ಪ್ರಸನ್ನ ಅವರಿಗೆ ಪೂರಕವಾದ ವಾತಾವರಣವಿದ್ದು, ಅವರ ಗೆಲುವು ಖಚಿತ ಎಂದರು.

ಶಿವಮೊಗ್ಗ ಕ್ಷೇತ್ರದಿಂದ ಕಾಂಗ್ರೆಸ್ ಸೇವಾದಳದ ಜಿಲ್ಲಾಧ್ಯಕ್ಷ ವೈ.ಹೆಚ್.ನಾಗರಾಜ್ ಕೂಡ ನಾಮಪತ್ರ ಸಲ್ಲಿಸಿದ್ದು, ಪಕ್ಷದ ಮುಖಂಡರ ಮತ್ತು ಜಿಲ್ಲೆಯ ಕಾಂಗ್ರೆಸ್ ಮುಖಂಡರ ಮನವಿಯ ಮೇರೆಗೆ ತಮ್ಮ ನಾಮಪತ್ರವನ್ನು ವಾಪಸ್ ಪಡೆಯಲಿದ್ದಾರೆ. ಹಾಗಾಗಿ ಯಾವ ಬಂಡಾಯವು ಇಲ್ಲ. ತಮ್ಮ ಮಾತಿಗೆ ಬೆಲೆ ಕೊಟ್ಟು ನಾಮಪತ್ರ ವಾಪಸ್ ತೆಗೆದುಕೊಂಡಿದ್ದಕ್ಕೆ ವೈ.ಹೆಚ್.ನಾಗರಾಜ್ ಅವರಿಗೆ ಅಭಿನಂದನೆಗಳು. ಪಕ್ಷ ಅವರಿಗೆ ಮುಂದಿನ ದಿನಗಳಲ್ಲಿ ಒಳ್ಳೆಯ ಸ್ಥಾನಮಾನ ನೀಡಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ನ ಹಿರಿಯ ಮುಖಂಡರಾದ ಎಲ್.ರಾಮೇಗೌಡ, ಇಕ್ಬಾಲ್ ನೇತಾಜಿ, ಆಡಳಿತ ಉಸ್ತುವಾರಿ ಸಿ.ಎಸ್.ಚಂದ್ರಭೂಪಾಲ, ಜಿಲ್ಲಾ ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ವೈ.ಹೆಚ್.ನಾಗರಾಜ್, ಸಾಮಾಜಿ ಜಾಲತಾಣದ ಅಧ್ಯಕ್ಷ ಎನ್.ಡಿ.ಪ್ರವೀಣ್ಕುಲಮಾರ್, ಚಂದನ್, ವಿನಾಯಕ ಮೂರ್ತಿ ಸೇರಿದಂತೆ ಹಲವರಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…