ಶಿವಮೊಗ್ಗ: ನಗರದ ಸೋಮಿನಕೊಪ್ಪ ಬಡಾವಣೆಯಲ್ಲಿ ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಶೋಷಿತ ಸಮುದಾಯಗಳ ವೇದಿಕೆ ಜಿಲ್ಲಾ ಘಟಕದಿಂದ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.ಪಾಲಿಕೆ ವ್ಯಾಪ್ತಿಗೆ ಬರುವ ವಾರ್ಡ್ ನಂಬರ್ 1ರ ಸೋಮಿನಕೊಪ್ಪದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದ್ದು, ಮೂಲಭೂತಸೌಲಭ್ಯಗಳಾದ ಕುಡಿಯುವ ನೀರು, ರಸ್ತೆ ದೀಪ, ಒಳಚರಂಡಿ ಇಲ್ಲದೇ ಸ್ಥಳೀಯರು ನರಕಯಾತನೆ ಅನುಭವಿಸುತ್ತಿದ್ದಾರೆ.
ಸರಿಯಾದ ಬಾಕ್ಸ್ ಚರಂಡಿ ಇಲ್ಲದೇ ನೀರು ಸರಾಗವಾಗಿ ಹರಿಯದೇ ಅಲ್ಲಲ್ಲಿ ನೀರು ನಿಂತು ವಿಪರೀತ ಸೊಳ್ಳೆಕಾಟ ಇದೆ. ದುರ್ವಾಸನೆ ಬರುತ್ತಿದೆ ಎಂದು ದೂರಿದರು.ಸ್ಥಳೀಯ ಪಾಲಿಕೆ ಸದಸ್ಯರು ಈ ಬಗ್ಗೆ ಗಮನ ಹರಿಸುತ್ತಿಲ್ಲ. ಕೂಡಲೇ ಪಾಲಿಕೆ ಆಯುಕ್ತರು ಮತ್ತು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಸ್ಥಳೀಯರ ದೂರನ್ನು ಪರಿಶೀಲಿಸಿ ಮೂಲಭೂತ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿದರು.ಈ ಸಂದರ್ಭದಲ್ಲಿ ವೇದಿಕೆ ಪದಾಧಿಕಾರಿಗಳಾದ ಮುಕ್ಬಲ್ ಅಹ್ಮದ್, ದಾದಾ ಖಲಂದರ್, ಷಣ್ಮುಖಪ್ಪ, ಅರುಣ್ ಕುಮಾರ್, ಪುಷ್ಪಲತಾ ಸೇರಿದಂತೆ ಹಲವರಿದ್ದರು.