ಅರಣ್ಯ ಜಾಗ ಒತ್ತುವರಿಯಲ್ಲಿ ಶಾಮೀಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪವಲಯ ಅರಣ್ಯಾಧಿಕಾರಿ, ಮೋಜಣಿದಾರ ಎಸ್.ಶಿವರುದ್ರಪ್ಪ ಅವರನ್ನು ಅಮಾನತುಗೊಳಿಸಲಾಗಿದೆ.
ಚಿಕ್ಕಮಗಳೂರು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಡಾ.ಸುನೀಲ್ ಪಂವಾರ್ ಅವರು ಆಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಕೊಪ್ಪ ತಾಲ್ಲೂಕಿನ ಅಸಗೋಡಿನ ಸರ್ವೆ ನಂ 227ರ ಸೆಕ್ಷನ್-4 ಅಧಿಸೂಚಿತ ಅರಣ್ಯ ಜಾಗವನ್ನು ಒತ್ತುವರಿ ಮಾಡಿ ಬೇಲಿ ನಿರ್ಮಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪ ವಿಭಾಗದ ಉಪ ಅರಣ್ಯಸಂರಕ್ಷಣಾಧಿಕಾರಿ, ಇತರ ಅಧಿಕಾರಿಗಳು ಪರಿಶೀಲಿಸಿ ವರದಿ ನೀಡಿದ್ದಾರೆ. ಪ್ರಕರಣದಲ್ಲಿ ಶಿವರುದ್ರಪ್ಪ ಶಾಮೀಲಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಶಿವರುದ್ರಪ್ಪ ಅವರು ಪ್ರಸ್ತುತ ಕೊಗ್ರೆ ಶಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.ಈ ಹಿಂದೆ ಶೃಂಗೇರಿ ವಲಯದ ಕಸಬಾ ಶಾಖೆಯಲ್ಲಿದ್ದರು.
ವರದಿ ಜೆ ಕೆ ಮಹೇಶ್ ಬೆಂಗಳೂರು