ಕಾರಟಗಿ…

ಕಾರಟಗಿ : ರಾಜ್ಯದಲ್ಲಿ ಜನರು ಕಾಂಗ್ರೆಸ್ ಜೆಡಿಎಸ್ ಪಕ್ಷಗಳನ್ನು ತಿರಸ್ಕಾರ ಮಾಡಿದ್ದಾರೆ . ಈಗ ಕಾಂಗ್ರೆಸ್ ವಿರೋಧ ಪಕ್ಷವಾಗಿ ಉಳಿಯಲು ಸಾಧ್ಯವಿಲ್ಲ . ಅದು ಸಹ ಮುಂದಿನ ದಿನಗಳಲ್ಲಿ 1ಪ್ರಾದೇಶಿಕ ಪಕ್ಷವಾಗಿ ಉಳಿಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ಈಶ್ವರಪ್ಪ ಹೇಳಿದರು.

ಪದ್ಮಶ್ರೀ ಕಲ್ಯಾಣ ಮಂಟಪದಲ್ಲಿ ನಡೆದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರಾಯಚೂರು ಕೊಪ್ಪಳ ಕ್ಷೇತ್ರದ ಅಭ್ಯರ್ಥಿ ವಿಶ್ವನಾಥ ಬನಹಟ್ಟಿ ಇವರ ಪರ ಪ್ರಚಾರದ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದರು.
ಕಾಂಗ್ರೆಸ್ ಮತ್ತು ಜೆಡಿಎಸ್ ಸರ್ಕಾರ ಬೇಡ ಎಂದು ಜನ ಬಿಜೆಪಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ . ಈಗ ನಡೆಯುತ್ತಿರುವ ಪರಿಷತ್ ಚುನಾವಣೆಯಲ್ಲಿ ಹದಿನೈದರಿಂದ ಹದಿನಾರು ಕಡೆ ನಮ್ಮ ಅಭ್ಯರ್ಥಿಗಳು ಗೆಲ್ಲುವುದು . ಗ್ರಾಮ ಪಂಚಾಯಿತಿಯ ಸದಸ್ಯರು ಈ ಬಾರಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಕೆಲಸ ಮಾಡಬೇಕು ಎಂದರು.

ಮುಂದಿನ ದಿನಗಳಲ್ಲಿ ನಮ್ಮ ಸರ್ಕಾರದಿಂದ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರುಗಳು ಪಿಡಿಒಗಳಿಗೂ ತರಬೇತಿ ನೀಡಲಾಗುತ್ತದೆ. ವಿಧಾನಸಭೆ ಮತ್ತು ಲೋಕಸಭೆ ಚುನಾವಣೆ ಗೆಲ್ಲುವುದು ಸುಲಭ ಆದರೆ ವಿಧಾನಪರಿಷತ್ ಚುನಾವಣೆ ಕಷ್ಟ ಇದರಲ್ಲಿ ಗ್ರಾಮ ಪಂಚಾಯತ್ ಸದಸ್ಯರ ಪಾತ್ರ ಮುಖ್ಯ ನಿಮ್ಮ ಪ್ರಯತ್ನ ನಮಗೆ ಗೆಲ್ಲುವ ಆಗಬೇಕು ಎಂದರು.

ವರದಿ ಗೌತಮ್ ಯಾದವ್ ಕೊಪ್ಪಳ