ಶಿವಮೊಗ್ಗ: ಅಕ್ರಮ ಗೋಸಾಗಾಣೆಕೆ ಮಾಡುವಾಗ ಇಬ್ಬರು ಜೀವ ಒತ್ತೆ ಇಟ್ಟು ಗೋವುಗಳನ್ನು ಸಂರಕ್ಷಿಸಿದ್ದಾರೆ. ಅವರ ಮೇಲೆ ದಾಳಿ ಮಾಡಲಾಗಿದ್ದು, ಗಾಯಗೊಂಡು ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಅವರ ಸಂಪೂರ್ಣ ಚಿಕಿತ್ಸಾ ವೆಚ್ಚ ನಾನೇ ಭರಿಸುತ್ತೇನೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಅಕ್ರಮ ಗೋ ಸಾಗಾಣೆ, ಗೋ ಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ. ಇದನ್ನು ತಡೆಯಲು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕಾಗಿದೆ. ಗೋ ಕಳ್ಳರ ಜೊತೆಗೆ ಪೊಲೀಸರು ಶಾಮೀಲಾಗಿರುವುದು ಗಮನಕ್ಕೆ ಬಂದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದರು.ಮಾಜಿ ಸಿಎಂ ಸಿದ್ಧರಾಮಯ್ಯ ಅವರು ಪ್ರಧಾನಿ ಮೋದಿ ಅವರ ನಡತೆಯನ್ನು ನೋಡಿ ಕಲಿಯಲಿ.

ಅವರು ಮಾಜಿ ಪ್ರಧಾನಿ ದೇವೇಗೌಡರಿಗೆ ಅದೆಷ್ಟು ಗೌರವ ಕೊಟ್ಟರು ಎಂಬುದನ್ನು ತಿಳಿದುಕೊಳ್ಳಲಿ. ಬಾಯಿಗೆ ಬಂದಂತೆ ಬಿಜೆಪಿ ರಾಜ್ಯಾಧ್ಯಕ್ಷರ ಮೇಲೆ ಮತ್ತು ಬಿಜೆಪಿ ಮುಖಂಡರ ಬಗ್ಗೆ ಮಾತನಾಡುವುದನ್ನು ನಿಲ್ಲಿಸಲಿ. ಅವರಿಗೆ ನಾಗರಿಕತೆಯ ಪಾಠದ ಅವಶ್ಯಕತೆ ಇದೆ ಎಂದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…