ಶಿವಮೊಗ್ಗ ಜಿಲ್ಲಾದ್ಯಂತ ಲಸಿಕೆ ಸಿಗದೆ ಜನಸಾಮಾನ್ಯರು ಪರದಾಡುತ್ತಿದ್ದಾರೆ ವ್ಯಾಕ್ಸಿನ್ ಗಾಗಿ ದಿನಗಟ್ಟಲೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ ಇಂಥ ಸಂದರ್ಭದಲ್ಲಿ ಜಿಲ್ಲೆಯ ಖಾಸಗಿ ಆಸ್ಪತ್ರೆಗಳು ಮಾತ್ರ ಜನರಿಂದ ಹಣ ಸುಲಿಗೆ ಮಾಡಿ ವ್ಯಾಕ್ಸಿನ್ ನೀಡುತ್ತಿದ್ದಾರೆ .ರಾಜ್ಯಾದ್ಯಂತ ಉಚಿತವಾಗಿ ಲಸಿಕೆ ನೀಡುತ್ತಿದ್ದರೂ ಮುಖ್ಯಮಂತ್ರಿ ತವರು ಜಿಲ್ಲೆಯಾದ ಶಿವಮೊಗ್ಗದಲ್ಲಿ ಬಹುತೇಕ ಖಾಸಗಿ ಆಸ್ಪತ್ರೆಗಳು 700 ರಿಂದ 1200 ರೂ ಗೆ ನೀಡುತ್ತಿದ್ದಾರೆ . ಸರ್ಕಾರಿ ಆಸ್ಪತ್ರೆಗಳಿಗೆ ಸಿಗದ ವ್ಯಾಕ್ಸೀನ್ ಗಳು ಖಾಸಗಿ ಆಸ್ಪತ್ರೆಗಳಿಗೆ ಸಿಗುತ್ತಿರೋದು ಹೇಗೆ ಎಂಬುದರ ಬಗ್ಗೆ ಅನುಮಾನ ಮೂಡಿಸಿದೆ .ಮುಖ್ಯಮಂತ್ರಿ ತವರು ಜಿಲ್ಲೆಯಲ್ಲೇ ಇಂಥ ಪರಿಸ್ಥಿತಿ ಇರುವಾಗ ಇನ್ನು ರಾಜ್ಯದ ಪರಿಸ್ಥಿತಿ ಹೇಳತೀರದು .ಶೀಘ್ರವೇ ಜಿಲ್ಲಾಡಳಿತ ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕು ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲೂ ಉಚಿತವಾಗಿ ವ್ಯಾಕ್ಸಿನ್ ನೀಡಲು ಆದೇಶಿಸಬೇಕು .ಹಣ ಪಡೆಯುವ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ವಹಿಸಬೇಕು .ಅಲ್ಲದೆ ಸರ್ಕಾರಿ ಆಸ್ಪತ್ರೆಗಳಿಗೆ ಸಿಗದ ವ್ಯಾಕ್ಸಿನ್ ಖಾಸಗಿ ಆಸ್ಪತ್ರೆಗಳಿಗೆ ಹೇಗೆ ಪೂರೈಕೆ ಆಗುತ್ತಿದೆ ಎಂಬ ಬಗ್ಗೆ ತನಿಖೆ ನಡೆಸಬೇಕು ಎಂದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯ ಮಂತ್ರಿಗಳಿಗೆ ಯುವ ಕಾಂಗ್ರೆಸ್ ವತಿಯಿಂದ ಮನವಿ ಮಾಡಲಾಯಿತು.


ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ನ ರಾಜ್ಯ ಕಾರ್ಯದರ್ಶಿ ಕೆ ಚೇತನ್, ದಕ್ಷಿಣ ಬ್ಲಾಕ್ ಅಧ್ಯಕ್ಷ ವಿನಯ್,ಉತ್ತರ ಬ್ಲಾಕ್ ಉಪಾಧ್ಯಕ್ಷ ಗಿರೀಶ್ , ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಮಹಮ್ಮದ್ ನಿಹಾಲ್ ,NSUI ನಗರ ಅಧ್ಯಕ್ಷ ವಿಜಯ್ ,ಯುವ ಮುಖಂಡ ಮಧುಸೂದನ್ ,ಅಬ್ದುಲ್ಲಾ ,ಮಂಜು, ಕಾರ್ಯಕರ್ತರು ಪಾಲ್ಗೊಂಡಿದ್ದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ