ಮಲವಗೊಪ್ಪದ ಭಗತ್ ಸಿಂಗ್ ಕನ್ನಡ ಯುವಕರ ಸಂಘದ ವತಿಯಿಂದ ಅದ್ಧೂರಿಯಾಗಿ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು. ತಾಯಿ ಭುವನೇಶ್ವರಿಯ ರಾಜಬೀದಿ ಉತ್ಸವ ನಡೆಸಲಾಯಿತು. ನಟ ಪುನೀತ್ ರಾಜಕುಮಾರ್ ಅವರಿಗೆ ನಮನ ಸಲ್ಲಿಸಲಾಯಿತು.

ಮಲವಗೊಪ್ಪದ ಚನ್ನಬಸವ ದೇವಸ್ಥಾನದ ಆವರಣದಲ್ಲಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ನಡೆಸಲಾಯಿತು. ಭಾನುವಾರ ಬೆಳಗ್ಗೆ ಮಲವಗೊಪ್ಪದ ಮುಖಂಡರಿಂದ ಧ್ವಜಾರೋಹಣ ನೆರವೇರಿಸಲಾಯಿತು. ಬಳಿಕ ಮಲವಗೊಪ್ಪದ ಪ್ರಮುಖ ಬೀದಿಗಳಲ್ಲಿ ಭುವನೇಶ್ವರಿ ತಾಯಿಯ ಮೆರವಣಿಗೆ ನಡೆಸಲಾಯಿತು.

ಡೊಳ್ಳು, ನಂದಿಕೋಲು ಸೇರಿದಂತೆ ವಿವಿಧ ಕಲಾತಂಡಗಳು ಮರೆವಣಿಗೆಯಲ್ಲಿ ಭಾಗವಹಿಸಿದ್ದವು. ತಮಟಗೆ ಯುವಕರು ಹೆಜ್ಜೆ ಹಾಕಿದರು.

ಭಾನುವಾರ ಸಂಜೆ ರಸಮಂಜರಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಮಲವಗೊಪ್ಪದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ರಸಮಂಜರಿ ಕಾರ್ಯಕ್ರಮದಲ್ಲಿ ವಿವಿಧ ಚಿತ್ರಗೀತೆಗಳನ್ನು ಹಾಡಲಾಯಿತು.

ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಬಿ.ಹೆಚ್.ರಸ್ತೆಯ ವಿಭಜಕದ ಮೇಲೆ ತಾಯಿ ಭುವನೇಶ್ವರಿ ಮತ್ತು ನಟ ಪುನೀತ್ ರಾಜಕುಮಾರ್ ಅವರ ಭಾವಚಿತ್ರದ ಫ್ಲೆಕ್ಸ್ ಹಾಕಲಾಗಿತ್ತು. ವೇದಿಕೆ ಮೇಲೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು, ಕರ್ನಾಟಕದ ಐತಿಹಾಸಿಕ ಸ್ಥಳಗಳ ಭಾವಚಿತ್ರಗಳನ್ನು ಬಳಸಲಾಗಿತ್ತು. ಇದು ಹಲವರ ಗಮನ ಸೆಳೆಯಿತು. ಕರ್ನಾಟಕ ರಾಜ್ಯೋತ್ಸವದಲ್ಲಿ ಮಲವಗೊಪ್ಪದ ಯುವಕರು ಗ್ರಾಮಸ್ಥರು ಗ್ರಾಮದ ಮುಖಂಡರು ಪಾಲ್ಗೊಂಡಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…