ಶಿವಮೊಗ್ಗ: ಪರಿಸರ ಸಂರಕ್ಷಣೆಯು ನಮ್ಮ ನಿಮ್ಮೆಲ್ಲರ ಹೊಣೆಯಾಗಿದ್ದು, ಎಲ್ಲರೂ ಪರಿಸರ ಸಂರಕ್ಷಣೆಗೆ ಪ್ರಾಮುಖ್ಯತೆ ನೀಡಬೇಕು ಎಂದು ಪರಿಸರ ಪ್ರೇಮಿ ಗೀತಾ ಪಂಡಿತ್ ಅಭಿಪ್ರಾಯಪಟ್ಟರು.

ಶಿವಮೊಗ್ಗ ನಗರದಲ್ಲಿ ಇನ್ನರ್‌ವ್ಹೀಲ್ ಶಿವಮೊಗ್ಗ ಪೂರ್ವ ವತಿಯಿಂದ ಸ್ವಚ್ಛ ಭಾರತದಡಿಯಲ್ಲಿ ಆಯೋಜಿಸಿದ್ದ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾವುದೇ ಪರಿಸರ ಸಂರಕ್ಷಣೆ ಬಗ್ಗೆ ನಿರ್ಲಕ್ಷö್ಯ ವಹಿಸಬಾರದು. ಅದು ನಮ್ಮ ಕರ್ತವ್ಯ ಎಂದೇ ಭಾವಿಸಬೇಕು ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಸ್ವಚ್ಛ ಭಾರತ ನಿರ್ಮಾಣದ ಬಗ್ಗೆ ಅನೇಕ ಆಲೋಚನೆಗಳನ್ನು ಹಂಚಿಕೊAಡಿದ್ದು, ಸ್ವಚ್ಛ ಭಾರತ ಯೋಜನೆಯಡಿ ವಿವಿಧ ಬಡಾವಣೆಗಳಲ್ಲಿ ಜಾಗೃತಿ ಕಾರ್ಯಕ್ರಮ ನಡೆಸುತ್ತಿದ್ದೇವೆ. ಪರಿಸರ ಜಾಗೃತಿ ಮೂಡಿಸುವುದು, ಸ್ವಚ್ಛ ಭಾರತದ ಪರಿಕಲ್ಪನೆ ಬಗ್ಗೆ ತಿಳಿಸುವುದು ಮಾಡುವ ಜತೆಯಲ್ಲಿ ಬಟ್ಟೆ ಚೀಲಗಳನ್ನು ಸ್ವಂತ ಖರ್ಚಿನಲ್ಲಿ ಸಿದ್ಧಪಡಿಸಿ ಸಾರ್ವಜನಿಕರಿಗೆ ವಿತರಿಸುವ ಕೆಲಸ ಮಾಡುತ್ತಿದ್ದೇನೆ ಎಂದರು.

ಪ್ಲಾಸ್ಟಿಕ್ ಮುಕ್ತ ಭಾರತ ಅಂದೋಲನದಿAದ ಪ್ರೇರಿತಳಾಗಿ ಬಟ್ಟೆಯ ಕೈಚೀಲಗಳನ್ನು ಸ್ವತಃ ಸಿದ್ಧಪಡಿಸುತ್ತಿದ್ದೇನೆ. 1300ಕ್ಕೂ ಹೆಚ್ಚು ಜನರಿಗೆ ಹಂಚಿದ್ದೇನೆ. ಪ್ರಧಾನಿ ನರೇಂದ್ರ ಮೋದಿಯವರಿಗೂ ಕಳುಹಿಸಿದ್ದೆ. ಅವರಿಂದ ಮೆಚ್ಚುಗೆಯ ಮರುಪತ್ರವು ಬಂದಿರುತ್ತದೆ. ಎಲ್ಲರೂ ಪ್ಲಾಸ್ಟಿಕ್ ಬಳಕೆ ಬಿಟ್ಟು ಬಟ್ಟೆ ಕೈಚೀಲಗಳನ್ನೇ ಬಳಸುವ ಸಂಕಲ್ಪ ಮಾಡಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಇನ್ನರ್‌ವ್ಹೀಲ್ ಶಿವಮೊಗ್ಗ ಪೂರ್ವ ಅಧ್ಯಕ್ಷೆ ಜಯಂತಿ ವಾಲಿ ಮಾತನಾಡಿದರು. ಇನ್ನರ್‌ವ್ಹೀಲ್ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಬಿಂದು ವಿಜಯ್‌ಕುಮಾರ್, ವೀಣಾ ಹರ್ಷ, ರಾಜೇಶ್ವರಿ, ಶಬರಿ ಕಡಿದಲ್, ವಾಣಿ ಪ್ರವೀಣ್, ಮಮತಾ ಸುದಿಂದ್ರ, ಮಧುರ ಮಹೇಶ್, ಶಿಲ್ಪಾ, ಲತಾ ಹಾಗೂ ಇನ್ನರ್‌ವ್ಹೀಲ್ ಸದಸ್ಯರು ಇದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…