ಶಿವಮೊಗ್ಗ: ಕಳೆದ ಶುಕ್ರವಾರ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ 300 ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆರ್.ಪ್ರಸನ್ನಕುಮಾರ್ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಚುನಾವಣೆಯಲ್ಲಿ ಮತ ನೀಡಿದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು.ಕ್ಷೇತ್ರದ ಎಲ್ಲಾ ಮತಗಟ್ಟೆಗಳಲ್ಲಿ ಸಹ ನನಗೆ ಹೆಚ್ಚಿನ ಮತ ಬಂದಿದ್ದು, ಶಿಕಾರಿಪುರ ತಾಲೂಕಿನಲ್ಲಿ ಸಮಬಲ ಹೋರಾಟ ನಡೆಸಿದ್ದೇನೆ. ಹೊನ್ನಾಳಿ, ಚನ್ನಗಿರಿ, ಮಾಯಕೊಂಡ ತಾಲೂಕಿನಲ್ಲಿ ಹೆಚ್ಚಿನ ಮತಗಳು ಬಂದಿವೆ. ಜೆಡಿಎಸ್ ಪಕ್ಷದ ಮತದಾರರು ಸಹ ನನಗೆ ಮತ ನೀಡಿದ್ದು, ಶೇ.15ರಷ್ಟು ಬಿಜೆಪಿ ಬೆಂಬಲಿತ ಮತದಾರರ ಮತಗಳು ಸಹ ನನಗೆ ಬಂದಿವೆ ಎಂದ ಅವರು, ಯಾವುದೇ ಮತಗಟ್ಟೆಗಳಲ್ಲಿ ನನಗೆ ಕಡಿಮೆ ಮತಗಳು ಬಂದಿಲ್ಲ ಎಂದರು.

ಚುನಾವಣೆಯ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ, ಹಾಗೂ ಶಾಸಕ ಬಿ.ಕೆ.ಸಂಗಮೇಶ್ವರ್, ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಕಿಮ್ಮನೆ ರತ್ನಾಕರ್, ಮಾಜಿ ಶಾಸಕ ಮಧುಬಂಗಾರಪ್ಪ, ಕೆ.ಬಿ.ಪ್ರಸನ್ನಕುಮಾರ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು, ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ನನ್ನ ಪರ ಕೆಲಸಮಾಡಿದವರಿಗೆ ಕೃತಜ್ಞತೆ ಸಲ್ಲಿಸಿದರು.ಪಕ್ಷ ನೀಡಿದ ಜವಾಬ್ದಾರಿಯನ್ನು ಮುಖಂಡರು ಪ್ರಾಮಾಣಿಕವಾಗಿ ನಿಭಾಯಿಸಿದ್ದಾರೆ. ಚುನಾವಣೆಯನ್ನು ಶಾಂತಿಯುತವಾಗಿ ನಡೆಸಿದ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸಿದರು. ಚುನಾವಣೆಯಲ್ಲಿ ಮತ ನೀಡಿದ ಮತದಾರರಿಗೆ, ಶ್ರಮಿಸಿದ ಮುಖಂಡರು, ಕಾರ್ಯಕರ್ತರಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಕೃತಜ್ಞತೆ ಸಲ್ಲಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಮುಖಂಡರಾದ ಸಿ.ಎಸ್.ಚಂದ್ರಭೂಪಾಲ, ಕಲಗೋಡು ರತ್ನಾಕರ್, ಎಸ್.ಪಿ.ದಿನೇಶ್, ಎನ್. ರಮೇಶ್, ಡಾ.ಶ್ರೀನಿವಾಸ್, ಹನುಮಂತು, ಯು.ಶಿವಾನಂದ, ಕೆ.ರಂಗನಾಥ್, ವಿಜಯಕುಮಾರ್ ಇಕ್ಕೇರಿ ರಮೇಶ್, ದೀಪಕ್ ಸಿಂಗ್ ಮಧುಸೂದನ್, ಚೇತನ್, ದೇವಿಕುಮಾರ್, ಎಸ್.ರವಿಕುಮಾರ್ ಇನ್ನಿತರರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…