ಬೆಳಗಾವಿಯಲ್ಲಿ ನಡೆಯುತ್ತಿರುವ ಕನ್ನಡ ವಿರೋಧಿ ಚಟುವಟಿಕೆಯ ಬೆಳಗಾವಿ ಯಲ್ಲಿರುವ ಕನ್ನಡಿಗರ ಬದುಕು ಕಷ್ಟಕರವಾಗಿದೆ ಬೆಳಗಾವಿ ಕರ್ನಾಟಕಕ್ಕೆ ಸೇರಿದ್ದು ಮಹಾರಾಷ್ಟ್ರಕ್ಕೆ ಅಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ಜಿಲ್ಲಾಧ್ಯಕ್ಷ ಕಿರಣ್ ಹೇಳಿದರು.
ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ವತಿಯಿಂದ ಶಿವಮೊಗ್ಗದ ಅಶೋಕ ವೃತ್ತದ ಬಳಿ ಪ್ರತಿಕೃತಿ ದಾಹನದೊಂದಿಗೆ ಪ್ರತಿಭಟನೆ ಮಾಡಿ ಎಮ್ ಇ ಎಸ್ ಹಾಗೂ ಶಿವಸೇನೆ ಯನ್ನು ವಜಾಗೊಳಿಸುವಂತೆ ಒತ್ತಾಯಿಸಿದರು.ಕನ್ನಡ ಧ್ವಜ ಸುಟ್ಟು ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸಗೊಳಿಸಿದ ಎಂಎಸ್ ಶಿವಸೇನೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಒತ್ತಾಯಪೂರ್ವಕವಾಗಿ ಕನ್ನಡಿಗರ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಿಸುವ ಪ್ರಯತ್ನ ನಡೆಯಿತಿರುವವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನದಲ್ಲಿ ಉಗ್ರ ಹೋರಾಟ ನಡೆಸುತ್ತಿವೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ಎಚ್ಚರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ಕಾರ್ಯಧ್ಯಕ್ಷ ಶಿವಕುಮಾರ್ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.