ಸಂಜೀವಿನಿ-ಕೆಎಸ್‍ಆರ್‍ಎಲ್‍ಪಿಎಸ್ ನ ಡಿಡಿಯುಜಿಕೆವೈ ಯೋಜನೆಯಡಿ ಡಿಸೆಂಬರ್ 21 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30 ರವರೆಗೆ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು ಶಿವಮೊಗ್ಗ ಇಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಉದ್ಯೋಗ ಮೇಳದಲ್ಲಿ ಸುಮಾರು 15 ಖಾಸಗಿ ಕಂಪೆನಿಗಳು ಭಾಗವಹಿಸಲಿದ್ದು ಅಭ್ಯರ್ಥಿಗಳು ಇದರ ಸದುಪಯೋಗ ಪಡೆಯಬಹುದಾಗಿದೆ. ಆಸಕ್ತರು https://forms.gle/9cQCbgUgxTtAUn2u6 ಗೂಗಲ್ ಲಿಂಕ್ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದ್ದು ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 08182-255294 ನ್ನು ಸಂಪರ್ಕಿಸಬಹುದು ಎಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…