ಇಂದು ರಾಜ್ಯ ನಾಗರೀಕರ ರಕ್ಷಣಾ ಸಮಿತಿ ವತಿಯಿಂದ ಶಿವಮೊಗ್ಗ ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಬೆಳಗಾವಿಯಲ್ಲಿ ಕನ್ನಡ ಧ್ವಜವನ್ನು ಸುಟ್ಟು ಹಾಕಿರುವ ಹಾಗೂ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯನ್ನು ವಿರೂಪಗೊಳಿಸಿರುವ ಹಾಗೂ ಬೆಳಗಾವಿಯಲ್ಲಿ ಶಾಂತಿ ಕದಡುವ ವಾತಾವರಣ ಸೃಷ್ಟಿಸುತ್ತಿರುವ ಎಂಇಎಸ್ ಪುಂಡರ ಮೇಲೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಹಾಗೂ ಎಂಇಎಸ್ ಸಂಘಟನೆಯನ್ನು ನಿಷೇಧಿಸುವಂತೆ ಆಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ನಾಗರೀಕ ರಕ್ಷಣಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಆರ್ ರಾಘವೇಂದ್ರ ಖಜಾಂಚಿ ಶಿವಮೊಗ್ಗ ವಿನೋದ್ ಗೌರವಾಧ್ಯಕ್ಷರಾದ ಲಕ್ಷ್ಮಿಕಾಂತ ಸಂಘಟನಾ ಕಾರ್ಯದರ್ಶಿ ಹರೀಶ್ ಕಾನೂನು ಸಲಹೆಗಾರರಾದ ಶಬರೀಶ್ ನಗರ ಘಟಕದ ಉಪಾಧ್ಯಕ್ಷರಾದ ಸತೀಶ್ ವೆಂಕಟೇಶ್ ಮತ್ತು ಸಮಿತಿಯ ಪ್ರಮುಖರಾದ ರುದ್ರೇಶ್ ಹರ್ಷಿತ್ ಜಸ್ಟಿನ್ ಸಾಗರ್ ಶಿವಕುಮಾರ್ ಉಪಸ್ಥಿತರಿದ್ದರು.