ಶಿವಮೊಗ್ಗ: ತಾತ್ಕಾಲಿಕ ನೌಕರರಾಗಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಸೇವೆಯಲ್ಲಿ ವಿಲೀನಗೊಳಿಸಬೇಕೆಂದು ಆಗ್ರಹಿಸಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಇಂದು ಮನವಿ ಸಲ್ಲಿಸಿತು.ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರು ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಇವರನ್ನು ಸೇವೆಯಲ್ಲಿ ವಿಲೀನಗೊಳಿಸಲು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಧಿಸೂಚನೆ ತಡೆಹಿಡಿಯಲಾಗಿದೆ ಎಂದರು.

ಬೆಳಗಾವಿ ಅಧಿವೇಶನದಲ್ಲಿ ಈ ಬಗ್ಗೆ ಚರ್ಚಿಸಿ ಸೂಕ್ತ ನಿರ್ಣಯ ಕೈಗೊಂಡು ಅತಿಥಿ ಉಪನ್ಯಾಸಕರನ್ನು ಸೇವೆಯಲ್ಲಿ ವಿಲೀನಗೊಳಿಸಬೇಕು ಮತ್ತು ಈ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಧಿಸೂಚನೆಯನ್ನು ತಡೆಹಿಡಿಯಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.ಈ ಸಂದರ್ಭದಲ್ಲಿ ಸಮಿತಿಯ ರಾಜ್ಯಾಧ್ಯಕ್ಷ ಡಾ.ಹೆಚ್. ಸೋಮಶೇಖರ ಶಿವಮೊಗ್ಗಿ, ರಾಜೇಶ್ ಕುಮಾರ್, ಸರ್ವಜ್ಞಮೂರ್ತಿ, ಸತೀಶ್, ದೀಪ ಮೊದಲಾದವರಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…