ಶಿವಮೊಗ್ಗ: ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ವತಿಯಿಂದ ಡಿ.28 ರ ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಚಿಕ್ಕ ಲಾಲ್ಬಾಎಗ್ನಿಂೆದ ಸಬಲೀಕರಣಕ್ಕಾಗಿ ಸಂಘರ್ಷ ರ್ಯಾಲಿ: ವಿಧಾನಸೌಧ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪ್ರಧಾನ ಸಂಚಾಲಕ ಟಿ.ಹೆಚ್. ಹಾಲೇಶಪ್ಪ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಎಸ್ಸಿ, ಎಸ್ಟಿ ದೌರ್ಜನ್ಯ ನಿಯಂತ್ರಣ ಕಾಯ್ದೆ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು. ಕೇಂದ್ರ ಸರ್ಕಾರ ಕರ್ನಾಟಕದ ಮಾದರಿಯಲ್ಲಿ ಎಸ್.ಸಿ.ಎಸ್.ಪಿ. ಹಾಗೂ ಟಿಎಸ್ಪಿಷ ಕಾಯ್ದೆ ಜಾರಿಗೊಳಿಸಬೇಕು. ವಿದ್ಯಾರ್ಥಿ ವೇತನ, ಭರ್ತಿ ಮೀಸಲಾತಿ, ಬ್ಯಾಕ್ಲಾನಗ್ ನೇಮಕಾತಿ, ಗುತ್ತಿಗೆ ಮತ್ತು ಸಂಗ್ರಹಣೆ ಅನುಷ್ಠಾನಗೊಳಿಸಬೇಕು. ರಾಜ್ಯದ ಎಸ್.ಸಿ.ಎಸ್.ಪಿ. ಹಾಗೂ ಟಿಎಸ್ಪಿ್ ಯೋಜನೆಯ ಅನುಸಾರ 2014 ರಿಂದ ಹಂಚಿಕೆಯಾಗಿರುವ ಹಣದ ಬಗ್ಗೆ ಸಾರ್ವಜನಿಕ ಲೆಕ್ಕ ಪರಿಶೋಧನೆ, ಕಾಯ್ದೆಯ ಕಲಂ 7 ಡಿ ರದ್ದಾಗಬೇಕು. ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ಹಾಗೂ ಸುಪ್ರೀಂಕೋರ್ಟ್ಗೆೆ  ಮೇಲ್ಮನವಿ ಸಲ್ಲಿಸಲು ಸೇರಿದಂತೆ ವಿವಿಧ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಬೇಕೆಂದು ಆಗ್ರಹಿಸಿ ವಿಧಾನಸೌಧ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಈ ರ್ಯಾಲಿಯಲ್ಲಿ ಜಿಲ್ಲೆಯಿಂದ 1500 ಜನರು ಭಾಗವಹಿಸುವಂತೆ ಸಿದ್ದತೆ ಮಾಡಿಕೊಳ್ಳಲಾಗಿದೆ. ವಿದ್ಯಾರ್ಥಿಗಳು, ಯುವಜನರು, ಕೃಷಿ ಕಾರ್ಮಿಕರು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ರ್ಯಾಲಿಯಲ್ಲಿ ಭಾಗವಹಿಸುವಂತೆ ಮನವಿ ಮಾಡಿಕೊಂಡರು.ಪತ್ರಿಕಾಗೋಷ್ಠಿಯಲ್ಲಿ ಶಿವಕುಮಾರ್ ಆಸ್ತಿ, ಸುಗೂರು ಪರಮೇಶ್ವರ್, ಮಂಜುನಾಥ್, ಎ.ಡಿ.ಆನಂದ್, ಜಗ್ಗು, ಡಿ.ಕೆ.ಹನುಮಂತಪ್ಪ ಇನ್ನಿತರರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…