ಮಂಗಳೂರು: ವಿಶ್ವ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಕಷ್ಟದಲ್ಲಿರುವ ಜನರನ್ನು ಗುರುತಿಸಿ ಸಹಾಯ ಮಾಡುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದೆ ಎಂದು ಸದಾಶಿವ ಶೆಟ್ಟಿ ಹೇಳಿದರು.
ಬಂಟ್ಸ್ ಹಾಸ್ಟೆಲಿನ ಅಮೃತ ಮಹೋತ್ಸವದಲ್ಲಿ ಜರುಗಿದ ವಿಶ್ವ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ನಡೆಸಿದ ಕಾರ್ಯಕ್ರಮದಲ್ಲಿ ಸಮಾಜದ ಜನತೆಯ ಸಹಕಾರಕ್ಕಾಗಿ ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ಪ್ರತಿವರ್ಷ ನನ್ನ ಸಂಸ್ಥೆಯಿಂದ 50 ಲಕ್ಷ ರೂಪಾಯಿ ದೇಣಿಗೆ ನೀಡುವುದಾಗಿ ಮುಂಬೈ ಹೇರಂಬ ಇಂಡಸ್ಟ್ರೀಸ್ ಅಧ್ಯಕ್ಷ ಸದಾಶಿವ ಶೆಟ್ಟಿ ಕನ್ಯಾನ ತಿಳಿಸಿದರು.
ವಿಶ್ವ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಮಾತನಾಡಿ ಸಮಾಜದ ಏಳಿಗೆಗಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ಮುಂದಿನ ದಿನಗಳಲ್ಲಿ ಸಮಾಜ ಮತ್ತು ಸಂಘಟನೆ ಬಲಪಡಿಸಲು ನಮ್ಮೆಲ್ಲರ ಕರ್ತವ್ಯ ಎಂದರು.
ಈ ಸಂದರ್ಭದಲ್ಲಿ ನೂತನ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ ರಾಜ್ಯ ಕಾಂಗ್ರೆಸ್ ಮುಖಂಡ ಮಿಥುನ್ ರೈ , ಜಯಕರ ಶೆಟ್ಟಿ ಇಂದ್ರಾಳಿ , ಮುನಿಯಾಲ್ ಉದಯಕುಮಾರ್ ಶೆಟ್ಟಿ , ಪಟ್ಲ ಸತೀಶ್ ಕುಮಾರ್ ಶೆಟ್ಟಿ, ಮತ್ತು ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.