ಶಿವಮೊಗ್ಗ: ರಾಜ್ಯ ವಾಲಿಬಾಲ್ ಸಂಸ್ಥೆ ಡಿ. 26 ರಂದು ಬೆಳಗ್ಗೆ 11.30 ಕ್ಕೆ ಕಂಟ್ರಿ ಕ್ಲಬ್ ನಲ್ಲಿ ರಾಜ್ಯಮಟ್ಟದ ಸರ್ವಸದಸ್ಯರ ಸಭೆಯನ್ನು ಕರೆಯಲಾಗಿದೆ ಎಂದು ಸಂಸ್ಥೆಯ ಕಾರ್ಯಾಧ್ಯಕ್ಷ ಜಯಪ್ರಕಾಶ್ ಕಳ್ಳಿ ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕ ವಾಲಿಬಾಲ್ ಸಂಸ್ಥೆ ರಾಜ್ಯಮಟ್ಟದ ಸಂಸ್ಥೆಯಾಗಿದ್ದು, ಅದರ ಶಿವಮೊಗ್ಗ ಘಟಕ ನಾಳೆ ಸಭೆಯಲ್ಲಿ ಅಸ್ತಿತ್ವಕ್ಕೆ ಬರಲಿದೆ. ಮತ್ತು ರಾಜ್ಯದ 25 ಜಿಲ್ಲೆಗಳಿಂದ ಎಲ್ಲಾ ಜಿಲ್ಲಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಸಭೆಗೆ ಆಗಮಿಸಲಿದ್ದು, ಹಲವು ತೀರ್ಮಾನ ತೆಗೆದುಕೊಳ್ಳಲಿದ್ದಾರೆ.
ಒಟ್ಟಾರೆ ವಾಲಿಬಾಲ್ ಕ್ರೀಡೆಯ ಅಭಿವೃದ್ಧಿ ನಮ್ಮ ಗುರಿಯಾಗಿದೆ. ಈ ಸಭೆಗೆ ಪದಾಧಿಕಾರಿಗಳು ಸರಿಯಾದ ಸಮಯಕ್ಕೆ ಹಾಜರಾಗಬೇಕು ಎಂದು ಕೋರಿದರು.ಪತ್ರಿಕಾಗೋಷ್ಠಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಲೋಕೇಶ್, ಸೋಮಶೇಖರ್, ಸುನಿಲ್ ಇದ್ದರು.