ಶಿವಮೊಗ್ಗ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಜಿಲ್ಲಾ ಯುವ ಕಾಂಗ್ರೆಸ್ ನ ಕಾರ್ಯಕಾರಣಿ ಸಭೆಯಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನ ಅಧ್ಯಕ್ಷರಾದ ಎಚ್.ಎಸ್ ಸುಂದರೇಶ್ , ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್ ಕುಮಾರ್, ಶಿವಮೊಗ್ಗ ಜಿಲ್ಲೆಯ ಉಸ್ತುವಾರಿಗಳಾದ ರಾಜ್ಯ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಟಿ.ಎಸ್ , ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ರಫೀ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಚಾಲನೆ ನೀಡಿ ಹಾಗೂ ನೂತನ ಜಿಲ್ಲಾ ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ವಿತರಿಸಿದರು.

ಈ ಸಭೆಯ ಅಧ್ಯಕ್ಷತೆಯನ್ನು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಎಚ್.ಪಿ. ಗಿರೀಶ್ ವಹಿಸಿದ್ದರು
ಈ ಸಭೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ನ ಉಪಾಧ್ಯಕ್ಷ ಶಶಿಕುಮಾರ್ ಸಿರಿಗೆರೆ , ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಉಮೇಶ್ ಬಾಳೆಗುಂಡಿ ಕಲೀಮ್, ಮಹಮದ್ , ಉತ್ತರ ಬ್ಲಾಕ್ ಅಧ್ಯಕ್ಷರಾದ ಜಿಲ್ಲೆಯ ಬ್ಲಾಕ್ ಅಧ್ಯಕ್ಷರುಗಳಾದ ಬಿ ಲೋಕೇಶ್ , ಈಟಿ ನಿತಿನ್ , ಅಫ್ತಾಬ್ ಅಹ್ಮದ್ , ಅಶೋಕ್ ಬೇಳುರು, ಅಮರನಾಥ್ ಶೆಟ್ಟಿ ,ರಾಘವೇಂದ್ರ , ಕರುಣಾಕರ್ , ಹಬೀಬುಲ್ಲಾ , ನಯಾಜ್ ಅಹಮದ್ , ಮಲ್ಲಿಕಾ ನಾಯಕ್, ಮನು , ಮಹೇಂದ್ರ, ಯುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಆದರ್ಶ , ರಾಜ್ಯ ವಕ್ತಾರ ಅಮೋಸ್, ಹಾಗೂ ಎಲ್ಲ ನೂತನ ಜಿಲ್ಲಾ ಪದಾಧಿಕಾರಿಗಳು ಶಿವಮೊಗ್ಗ ನಗರದ ಬ್ಲಾಕ್ ಪದಾಧಿಕಾರಿಗಳು ಉಪಸ್ಥಿತರಿದ್ದರು

ವರದಿ ಮಂಜುನಾಥ್ ಶೆಟ್ಟಿ…