ಶಿವಮೊಗ್ಗ: ರಾಜ್ಯದ ಕಟ್ಟಕಡೆಯ ಅಸಂಘಟಿತ ಕಾರ್ಮಿಕರಿಗೆ ಸರ್ಕಾರದ ಮೂಲ ಸೌಕರ್ಯದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಅಸಂಘಟಿತ ಕಾರ್ಮಿಕ ಸಂಘಟನೆ ಹಮ್ಮಿಕೊಂಡಿದೆ ಎಂದು ರಾಜ್ಯ ಅಸಂಘಟಿತ ಕಾರ್ಮಿಕರ ಸಂಘದ ಅಧ್ಯಕ್ಷ ಕುಪೇಂದ್ರ ಆಯನೂರು ಹೇಳಿದ್ದಾರೆ.
ಅವರು ಇಂದು ವಿನೋಬನಗರದ ವಿಧಾತ್ರಿ ಭವನದಲ್ಲಿ ಅಸಂಘಟಿತ ಕಾರ್ಮಿಕರ ಸಂಘದ ಪದಾಧಿಕಾರಿಗಳ ರಾಜ್ಯ ಕಾರ್ಯಕಾರಿಣಿ ಸಭೆ ಮತ್ತು ಗುರುತಿನ ಚೀಟಿ ವಿತರಿಸಿ ಮಾತನಾಡಿದರು. ಕಾರ್ಮಿಕರಿಗೆ ಅನ್ಯಾವಾದಾಗ ನ್ಯಾಯ ಕೊಡಿಸುವ ಕೆಲಸ ಈ ತಂಡ ಮಾಡುತ್ತಿದೆ. ಸರ್ಕಾರದ ಸೌಲಭ್ಯ ವಂಚಿತರಿಗೆ ಸೌಲಭ್ಯ ಕಲ್ಪಿಸುವ ಕೆಲಸ ಮಾಡುತ್ತಿದೆ. ಕಟ್ಟಡ ಕಾರ್ಮಿಕರಿಗೆ ಸರ್ಕಾರ ಅನೇಕ ಸೌಲಭ್ಯ ನೀಡಿದೆ. ಆದರೆ, ಅಸಂಘಟಿತ ಕಾರ್ಮಿಕರಿಗೆ ಈ ಬಗ್ಗೆ ಜಾಗೃತಿ ಅವಶ್ಯಕತೆ ಇದೆ.
ಈ ಹಿನ್ನಲೆಯಲ್ಲಿ ಅಸಂಘಟಿತ ಕಾರ್ಮಿಕರಿಗೆ ಎಲ್ಲಾ ಮೂಲಸೌಕರ್ಯ ಒದಗಿಸುವ ಕೆಲಸವನ್ನು ಎಲ್ಲಾ ಜಿಲ್ಲೆಗಳ ಪದಾಧಿಕಾರಿಗಳು ಮಾಡಬೇಕು ಎಂದು ಅವರು ತಿಳಿಸಿದರು.ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ಪ್ರದೀಪ್ ಹೊನ್ನಪ್ಪ, ಪದ್ಮ ನವೀನ್, ಸಂಧ್ಯಾ ಕುಮಾರ್, ಕೇಶವಮೂರ್ತಿ, ನಿರ್ಮಲಾ ರಮೇಶ್, ಶಿವಮೊಗ್ಗ ನಗರ ಅಧ್ಯಕ್ಷೆ ಸುರೇಖಾ ಪಾಲಾಕ್ಷಪ್ಪ ಮೊದಲಾದವರಿದ್ದರು.