ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಸಭಾಂಗಣದಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳಿಗೆ ಇಂದು ಹಮ್ಮಿಕೊಂಡಿದ್ದ ಒಂದು ದಿನದ ತರಬೇತಿ ಕಾರ್ಯಗಾರವನ್ನು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಮತಿ ಪವಿತ್ರ ರಾಮಯ್ಯ ಅವರು ಉದ್ಘಾಟನೆ ಮಾಡಿ, ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಸಹಕಾರ ಇಲಾಖೆಯ ಭೂ ಅಭಿವೃದ್ದಿ ಅಧಿಕಾರಿ ಶ್ರೀಮತಿ ನಯನ ಅವರು, ಸಹಾಯಕ ಭೂ ಅಭಿವೃದ್ದಿ ಅಧಿಕಾರಿ ಶ್ರೀ ಶಾಂತರಾಜು ಅವರು ಹಾಗೂ ಸಂಘದ ಪ್ರಮುಖರು ಉಪಸ್ಥಿತರಿದ್ದರು.