ಶಿವಮೊಗ್ಗ: ನಗರದ ನೆಹರೂ ಕ್ರೀಡಾಂಗಣದಲ್ಲಿ ಸಿವಿಲ್ ಪೊಲೀಸ್ ನೇಮಕಾತಿಗೆ ದೈಹಿಕ ಪರೀಕ್ಷೆ ನಡೆಸಲಾಗುತ್ತಿದ್ದು, ರಾಜ್ಯದ ವಿವಿಧೆಡೆಯಿಂದ ಅಭ್ಯರ್ಥಿಗಳು ಆಗಮಿಸಿದ್ದಾರೆ. ಇದೇ ಮೊದಲ ಬಾರಿಗೆ ಮಹಿಳಾ ಅಭ್ಯರ್ಥಿಗಳು ಕೂಡ ವಿವಿಧ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದು, ಜಿಲ್ಲಾ ಪೊಲೀಸ್ ಇಲಾಖೆ ಎಲ್ಲಾ ತಯಾರಿ ನಡೆಸಿದೆ. ಜಿಲ್ಲೆಗೆ 104 ಸಿವಿಲ್ ಪೊಲೀಸ್ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ.

516 ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆಗೆ ಭಾಗವಹಿಸಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಿಪ್ರಸಾದ್ ತಿಳಿಸಿದ್ದಾರೆ.ಎತ್ತರ, ಎದೆ ಸುತ್ತಳತೆ, ತೂಕ, ಓಟ, ಲಾಂಗ್ ಜಂಪ್, ಹೈಜಂಪ್ ಮತ್ತು ಶಾರ್ಟ್ ಪುಟ್ ಸೇರಿ ವಿವಿಧ ವಿಭಾಗಗಳಲ್ಲಿ ದೈಹಿಕ ಪರೀಕ್ಷೆ ನಡೆಸಲಾಯಿತು. ಮಾಜಿ ಸೈನಿಕರು ಮತ್ತು ಮಹಿಳೆಯರಿಗೆ ರಿಯಾಯಿತಿ ಇದೆ. ಡಿವೈಎಸ್ಪಿ ಪ್ರಶಾಂತ್ ಮನ್ನೋಳಿ ಮತ್ತಿತರ ಹಿರಿಯ ಅಧಿಕಾರಿಗಳು ಇದ್ದರು.

ವರದಿ ಮಂಜುನಾಥ್ ಶೆಟ್ಟಿ…