- ರಾಜ್ಯದಲ್ಲಿ ಕೊರೋನಾ ವೈರಸ್ (ಕೋವಿಡ-19) ಎರಡನೇ ಅಲೆಯೂ ಹರಡುತ್ತಿರುವ ಹಿನ್ನೆಲೆಯಲ್ಲಿ ಸಮಸ್ಯೆಗೆ ಒಳಗಾದ ರಾಜ್ಯದ ನಾಗರಿಕರಿಗೆ ಪರಿಹಾರ ಕಲ್ಪಿಸುವ ಸಲುವಾಗಿ ರಾಜ್ಯ ಸರ್ಕಾರದ “ಮುಖ್ಯ ಮಂತ್ರಿಗಳ ಪರಿಹಾರ ನಿಧಿಗೆ” ಸಹಕಾರಿ ಕ್ಷೇತ್ರವಾದ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ , ಜಿಲ್ಲೆಯ ಎಲ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು , ಪಟ್ಟಣ ಸಹಕಾರ ಬ್ಯಾಂಕುಗಳು ಹಾಗೂ ವ್ಯವಸಾಯೇತರ ಪತ್ತಿನ ಸಹಕಾರ ಸಂಘಗಳು , ಇದ್ದರೆ ಕೃಷಿ ಉತ್ಪನ್ನ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘಗಳು ಹಾಗೂ ಬ್ಯಾಂಕಿನ ನೌಕರರಿಂದ ದೇಣಿಯಾಗಿ ರೂ.50,00,000/- (ರೂ. ಐವತ್ತು ಲಕ್ಷಗಳು ಮಾತ್ರ ) ಗಳು ಸಾಂಗ್ ಸಂಗ್ರಹಣೆಯಾಗಿದ್ದು ,ಸದರಿ ಮೊತ್ತವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಾಗುತ್ತಿದ್ದು ಉದಾರವಾಗಿ ದೇಣಿಗೆ ನೀಡಿದ ಎಲ್ಲ ಸಹಕಾರ ಸಂಘ ಸಂಸ್ಥೆಗಳ ಆಡಳಿತ ಮಂಡಳಿಗೆ ಬ್ಯಾಂಕಿನ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸಲಾಗಿತ್ತು.
- ಜಿಲ್ಲೆಯ ಸಹಕಾರ ಕ್ಷೇತ್ರದ ವತಿಯಿಂದ ಸಹ ಸಂಗ್ರಹಣೆಯಾಗಿರುವ ದೇಣಿಗೆಯನ್ನು ಮುಖ್ಯಮಂತ್ರಿಗಳ ತವರು ಜಿಲ್ಲೆಯಾದ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ , ಸಂಕಷ್ಟಕ್ಕೀಡಾಗಿರುವ ನಾಗರಿಕರ ಅನುಕೂಲಕ್ಕೆ ವಿನಿಯೋಗವಾಗುವಂತೆ ಜಿಲ್ಲೆಯ ಎಲ್ಲ ಸಹಕಾರಿ ಸಂಸ್ಥೆಗಳ ಪರವಾಗಿ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಳ್ಳಲಾಗುತ್ತದೆ .
- ಕೊರೋನಾವೈರಸ್ ಎರಡನೇ ಅಲೆಯ ಈ ಸಂಕಷ್ಟದ ಸಂದರ್ಭದಲ್ಲಿಯೂ ಸಹಾ ಗ್ರಾಮೀಣ ಭಾಗದ ರೈತರಿಗೆ , ಹಿಂದುಳಿದ ವರ್ಗ ಹಾಗೂ ಮಹಿಳೆಯರಿಗೆ ಬ್ಯಾಂಕಿನಿಂದ ಒಟ್ಟು 65156 ಸದಸ್ಯರಿಗೆ ರೂ. 656.20 ಕೋಟಿ ಅಲ್ಪಾವಧಿ ಕೃಷಿ ಬೆಳೆ ಸಾಲ ಒದಗಿಸಲಾಗುತ್ತದೆ.
ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ.