ಇಂದು ದಿನಾಂಕ 03.01.2022 ರ ಸಂಜೆ ಶಿವಮೊಗ್ಗ ನಗರದ ಗೋಪಿ ವೃತ್ತದಲ್ಲಿ ಶಿವಮೊಗ್ಗ ಬಿಜೆಪಿ ಯುವ ಮೋರ್ಚಾ ದ ವತಿಯಿಂದ ಇಂದು ನಡೆದ ರಾಮನಗರದ ಸರ್ಕಾರಿ ಕಾರ್ಯಕ್ರಮದ ವೇದಿಕೆಯಲ್ಲಿ ಕಾಂಗ್ರೆಸ್ ನ ಗೂಂಡಾ ಸಂಸದ ಡಿ ಕೆ ಸುರೇಶ್ ಅವರ ಗೂಂಡಾ ವರ್ತನೆ ಹಾಗೂ ಸಚಿವರಾದ ಡಾ. ಅಶ್ವತ್ಥ್ ನಾರಾಯಣ ಅವರ ಭಾಷಣಕ್ಕೆ ಅಡ್ಡಿಪಡಿಸಿದ ವಿಚಾರವಾಗಿ ತೀವ್ರವಾಗಿ ಖಂಡಿಸಿ ಪ್ರತಿಭಟನೆ ನಡೆಸಿ ಡಿ.ಕೆ.ಸುರೇಶ್ ಅವರ ಪ್ರತಿಕೃತಿ ದೇಹವನ್ನು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಈ ಪ್ರತಿಭಟನೆಯನ್ನು ಉದ್ದೇಶಿಸಿ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾದ ಎಸ್. ದತ್ತಾತ್ರಿರವರು ನಗರ ಬಿಜೆಪಿ ಅಧ್ಯಕ್ಷ ರಾದ ಎನ್.ಕೆ ಜಗದೀಶ್ ರವರು ಹಾಗೂ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ಎಂ.ಬಿ.ಹರಿಕೃಷ್ಣ ಅವರು ಮಾತಾಡಿದರು ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಮಹಾಪೌರರಾದ ಸುನಿತಾ ಅಣ್ಣಪ್ಪನವರು ಜಿಲ್ಲಾ ಯುವ ಮೋರ್ಚಾ ಪದಾಧಿಕಾರಿಗಳು, ನಗರ ಯುವ ಮೋರ್ಚಾ ಪದಾಧಿಕಾರಿಗಳು, ಮಹಾನಗರ ಪಾಲಿಕೆ ಸದಸ್ಯರು, ಹಾಗೂ ಬಿಜೆಪಿ ಮುಖಂಡರು,ಕಾರ್ಯಕರ್ತರು ಉಪಸ್ಥಿತರಿದ್ದರು