ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ರಾಷ್ಟ್ರಪತಿಗಳಿಗೆ ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ಮಾಡಿಕೊಂಡರು. ದೇಶಾದ್ಯಂತ ಜನ ಕೊರೋನಾ ಎರಡನೇ ಅಲೆಯಿಂದ ತತ್ತರಿಸಿದ್ದು ಮೂರನೆಯ ಮುನ್ಸೂಚನೆ ಗಳಿದ್ದು ಇಂತಹ ಸಂದರ್ಭದಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ದರ ವನ್ನು ಕೇಂದ್ರ ಬಿಜೆಪಿ ಸರ್ಕಾರ ಏರಿಕೆ ಮಾಡುತ್ತಿರುವುದು ತೀವ್ರ ಖಂಡನೀಯ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾಗಿದ್ದರೂ ಕೇಂದ್ರ ಸರ್ಕಾರ ಎಕ್ಸೈಸ್ ಸುಂಕವನ್ನು ಹೆಚ್ಚಿಸಿ, ಈಗಾಗಲೇ ಕೊರೋನಾ ಲಾಕ್ ಡೌನ್ ನಿಂದ ತತ್ತರಿಸಿರುವ ದೇಶದ ಶ್ರೀಸಾಮಾನ್ಯನ ಮೇಲೆ ಹೊರೆ ಹಾಕುತ್ತಿದ್ದು ಸಮರ್ಪಕವಾಗಿ ಕರೋನವನ್ನು ನಿರ್ವಹಿಸದೇ ಅವೈಜ್ಞಾನಿಕ ಲಾಕ್ ಡೌನ್ ಘೋಷಣೆ ಮಾಡಿ ಯಾವುದೇ ವಿಶೇಷ ಪ್ಯಾಕೇಜನ್ನು ಸಹ ನೀಡದೆ ದೇಶದ ಜನರ ಜೀವ ಹಾಗು ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ದೇಶದ ಎಲ್ಲಾ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ನೂರು ರೂಪಾಯಿ ಗಡಿಯನ್ನು ದಾಟಿದ್ದು .ಇವೆಲ್ಲವೂ ಸರಕು ಸಾಗಾಣಿಕೆ ಮೇಲೆ ಹೊಡೆತ ಬೀಳುವುದರಿಂದ ಈಗಾಗಲೇ ಸಂಕಷ್ಟದಲ್ಲಿರುವ ಜನರಿಗೆ ಪೆಟ್ರೋಲ್ ಮತ್ತು ಡಿಸೈಲ್ ಬೆಲೆ ಏರಿಕೆಯಿಂದ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗುವುದೆಂದು ಆತಂಕ ಸೃಷ್ಟಿಯಾಗಿದ್ದು

ದೇಶದ ಜನರಿಗೆ ಪ್ರಧಾನಮಂತ್ರಿಗಳು ಮಾತ್ರ ಸ್ವಾವಲಂಬಿ ಬದುಕನ್ನು ಸಾಗಿಸಬೇಕೆಂದು ಹೇಳುತ್ತಾ ದೇಶದ ಶ್ರೀಸಾಮಾನ್ಯನ ಮೇಲೆ ಹೊರೆ ಹೇರುತ್ತಿರುವುದು ಎಷ್ಟರ ಮಟ್ಟಿಗೆ ಸರಿ

ಈ ಕೂಡಲೇ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಇಳಿಕೆ ಮಾಡಿ ದೇಶದ ಜನಕ್ಕೆ ಇಂತಹ ಸಂಕಷ್ಟದಿಂದ ಹೊರಬರಲುನೆರವಾಗಬೇಕು. ಇಲ್ಲವಾದಲ್ಲಿ.ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ಇಂತಹ ಜನವಿರೋಧಿ ನೀತಿಯ ಸರ್ಕಾರವನ್ನು ವಜಾ ಮಾಡಬೇಕೆಂದು ಯುವ ಕಾಂಗ್ರೆಸ್ ಆಗ್ರಹಿಸುತ್ತದೆ.ಈ ಪ್ರತಿಭಟನೆಯು ಸಾಂಕೇತಿಕವಾಗಿರುತ್ತದೆ ಮುಂದಿನ ದಿನಗಳಲ್ಲಿ ದೇಶದ ಜನರ ಪರವಾಗಿ ರಸ್ತೆಗಿಳಿದು ಕೋವಿಡ್ ನಿಯಮಗಳನ್ನು ಮೀರಿ ಉಗ್ರವಾದ ಹೋರಾಟ ನಡೆಸಲಾಗುವುದೆಂದು ಯುವ ಕಾಂಗ್ರೆಸ್ ಎಚ್ಚರಿಸುತ್ತದೆ.

ಪ್ರತಿಭಟನೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್ ಕುಮಾರ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್. ಪಿ . ಗಿರೀಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ರಂಗನಾಥ್ ಮಹಾನಗರ ಪಾಲಿಕೆ ಸದಸ್ಯ ಎಚ್.ಸಿ. ಯೋಗೀಶ್ , ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ಲೋಕೇಶ್ ಗ್ರಾಮಾಂತರ ಅಧ್ಯಕ್ಷ ಈ ಟಿ ನಿತಿನ್, ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಎಸ್ ಕುಮಾರೇಶ್ , ಪದಾಧಿಕಾರಿಗಳಾದ ಎಂ ರಾಹುಲ್, ಗಗನ್ ಗೌಡ, ಸಚಿನ್ ,ರಾಹುಲ್ , ವೆಂಕಟೇಶ್ ಕಲ್ಲೂರ್, ಸಂತೋಷ, ರಾಕೇಶ್, ನವೀನ್, ನಂದನ್ ,ಚೇತನ್, ವಿನಯ್ ದೇವರಾಜ್, ಇತರರು ಇದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ