ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗೌಡ್ರಳ್ಳಿ ಗ್ರಾಮದಲ್ಲಿನ ಆಲೆಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ನಬೀಕುಲ್ ಇಸ್ಲಾಂ, 21 ವರ್ಷ, ಅಸ್ಸಾಂ ರಾಜ್ಯ ಈತನ ಪತ್ನಿಯನ್ನು ಅತ್ಯಾಚಾರ ಮಾಡುವ ಉದ್ದೇಶದಿಂದ ಆರೋಪಿ ಮನ್ಸೂರ್ ಅಲಿಖಾನ್ ಈತನು ದಿನಾಂಕಃ- 22-07-2019 ರಂದು ರಾತ್ರಿ ಅವರು ವಾಸವಿದ್ದ ಮನೆಯ ಹೆಂಚನ್ನು ತೆಗೆದು ಮನೆಗೆ ನುಗ್ಗಿ ನಬೀಕುಲ್ ಇಸ್ಲಾಂನ ಪತ್ನಿಯನ್ನು ಹಿಡಿದುಕೊಳ್ಳಲು ಹೋದಾಗ ತಡೆಯಲು ಮುಂದಾದ ನಬೀಕುಲ್ ಇಸ್ಲಾಂ ನ ತಲೆಯ ಎಡ ಭಾಗಕ್ಕೆ ತನ್ನ ಕೈಲಿದ್ದ ಮರದ ರೀಫರ್ ನಿಂದ ಬಲವಾಗಿ ಹೊಡೆದ ಪರಿಣಾಮ ತೀವ್ರ ಸ್ವರೂಪದ ರಕ್ತಗಾಯಗಳಾಗಿ ಮೃತಪಟ್ಟಿರುತ್ತಾನೆಂದು ನೀಡಿದ ದೂರಿನ ಮೇರೆಗೆ ಗುನ್ನೆ ಸಂಖ್ಯೆ 172/2019 ಕಲಂ 302 ಐಪಿಸಿ ರೀತ್ಯಾ ಪ್ರಕರಣ ದಾಖಲಿಸಲಾಗಿರುತ್ತದೆ.

ತನಿಖಾಧಿಕಾರಿಗಳಾದ ಶ್ರೀ ಯೋಗೇಶ್, ಸಿಪಿಐ ಭದ್ರಾವತಿ ಗ್ರಾಮಾಂತರ ವೃತ್ತ ರವರು ಸದರಿ ಪ್ರಕರಣದ ತನಿಖೆಯನ್ನು ಕೈಗೊಂಡು ಆರೋಪಿ ಮನ್ಸೂರ್ ಅಲಿಖಾನ್, 31 ವರ್ಷ ಗೌಡ್ರಳ್ಳಿ ಗ್ರಾಮ ಭದ್ರಾವತಿ ಈತನನ್ನು ದಸ್ತಗಿರಿ ಮಾಡಿ, ಘನ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿರುತ್ತಾರೆ.

ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಶ್ರೀಮತಿ ರತ್ನಮ್ಮ.ಪಿ ರವರು ವಾದ ಮಂಡಿಸಿದ್ದು, ಮಾನ್ಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪೀಠಾಸೀನ ಭದ್ರಾವತಿ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು ಮಾನ್ಯ ನ್ಯಾಯಾಧೀಶರಾದ ಆರ್.ವೈ. ಶಶಿಧರ್ ರವರು ದಿನಾಂಕ 05-01-2022 ರಂದು ಆರೋಪಿತನ ವಿರುದ್ಧ ಕಲಂ 302 ಐಪಿಸಿ ಕಾಯ್ದೆ ಅಡಿಯಲ್ಲಿ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಆರೋಪಿ ಮನ್ಸೂರ್ ಅಲಿಖಾನ್ ನಿಗೆ ಜೀವಾವಧಿ ಶಿಕ್ಷೆ ಮತ್ತು 20,000/- ರೂ ದಂಡ, ದಂಡವನ್ನು ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 03 ವರ್ಷಗಳ ಕಾಲ ಸಾದಾ ಕಾರವಾಸ ಶಿಕ್ಷೆ ಮತ್ತು ಕಲಂ 450 ಐಪಿಸಿ ಅಡಿಯಲ್ಲಿ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ 03 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು 10,000/- ರೂ ದಂಡ, ದಂಡವನ್ನು ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 02 ತಿಂಗಳುಗಳ ಕಾಲ ಸಾದಾ ಕಾರವಾಸ ಶಿಕ್ಷೆಯನ್ನು ನೀಡಿ ಆದೇಶ ನೀಡಿರುತ್ತಾರೆ.

ವರದಿ ಮಂಜುನಾಥ್ ಶೆಟ್ಟಿ…